Mysore
32
few clouds

Social Media

ಗುರುವಾರ, 23 ಏಪ್ರಿಲ 2026
Light
Dark

ದಿತ್ವಾ ಚಂಡಮಾರುತ : ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಚಳಿ ಹೆಚ್ಚಳ

ಬೆಂಗಳೂರು : ದಿತ್ವಾ ಚಂಡಮಾರುತದ ಪ್ರಭಾವ ರಾಜ್ಯದ ಮೇಲೂ ತಟ್ಟಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದ್ದು, ಶೀತಗಾಳಿ ಹಾಗೂ ಚಳಿಗೆ ಜನತೆ ತತ್ತರಿಸಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ಮೈ ಕೊರೆಯುವ ಚಳಿಯೊಂದಿಗೆ ನಿನ್ನೆಯಿಂದ ತುಂತುರು ಮಳೆಯಾಗುತ್ತಿದ್ದು, ತೀವ್ರ ತಂಡಿಗೆ ಜನರು ಥಂಡ ಹೊಡೆದಿದ್ದಾರೆ. ಮುಂಜಾನೆ ಮತ್ತು ಸಂಜೆ ವೇಳೆ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣ, ಭಾರೀ ಚಳಿಯಿಂದ ಮನೆಯಿಂದ ಹೊರಬರದಂತಹ ವಾತಾವರಣ ನಿರ್ಮಾಣವಾಗಿದೆ.

ದಿನವಿಡೀ ಮೋಡ ಕವಿದಿದ್ದು, ಇನ್ನೆರೆಡು ಮೂರು ದಿನ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ: ಎರಡನೇ ಮದುವೆ ಆದ ನಟಿ ಸಮಂತಾ : ʻದಿ ಫ್ಯಾಮಿಲಿ ಮ್ಯಾನ್’ ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸಬಾಳು

ದಕ್ಷಿಣ ಒಳನಾಡು, ಕರಾವ ಳಿ ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದ್ದು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ದ.ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌‍ ಇದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌‍ಗೆ ಇಳಿದಿದ್ದು, ಚಳಿಯಿಂದ ಬೆಚ್ಚಗಿರಲಿ ಜನರು ಸ್ವೆಟ್ಟರ್‌, ಟೋಪಿ, ಜರ್ಕಿನ್‌ಗಳ ಖರೀದಿಯಲ್ಲಿ ತೊಡಗಿದ್ದಾರೆ. ದಿಢೀರನೆ ಬದಲಾದ ಹವಾಮಾನದಿಂದ ಜ್ವರ, ಶೀತ, ಕೆಮ್ಮು ಹೆಚ್ಚಾಗುವ ಸಾಧ್ಯತೆಯಿದ್ದು, ಆರೋಗ್ಯದತ್ತ ಗಮನ ಹರಿಸುವುದು ಸೂಕ್ತ ಎಂದು ವೈದ್ಯರು ತಿಳಿಸಿದ್ದು, ಆದಷ್ಟು ಬಿಸಿನೀರು, ಬಿಸಿ ಆಹಾರ ಪದಾರ್ಥ ಹಾಗೂ ದೇಹವನ್ನು ಆದಷ್ಟು ಬೆಚ್ಚಗಿಟ್ಟುಕೊಳ್ಳುವಂತೆ ಕರೆ ನೀಡಿದ್ದಾರೆ.

Tags:
error: Content is protected !!