Mysore
29
light rain

Social Media

ಸೋಮವಾರ, 02 ನವೆಂಬರ್ 2026
Light
Dark

ಚಂಡಮಾರುತದ ಪ್ರಭಾವ: ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುನ್ಸೂಚನೆ!

ಬೆಂಗಳೂರು: ಅರ್ನಬ್‌ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮುರುಸು’ ಚಂಡಮಾರುತದ ಪರಿಣಾಮ, ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ.

ಚಂಡಮಾರುತದ ಪರಿಣಾಮ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿ ಆಗಾಗ ಬಲವಾದ ಮೇಲ್ಮೈ ಗಾಳಿ ಬೀಸಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನವೆಂಬರ್‌.2 ಮತ್ತು 3ರಂದು ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.

ನವೆಂಬರ್‌ 3 ಮತ್ತು 4ರಂದು ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಹಾಗೂ ರಾತ್ರಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Tags:
error: Content is protected !!