ಬೆಂಗಳೂರು: ಅರ್ನಬ್ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮುರುಸು’ ಚಂಡಮಾರುತದ ಪರಿಣಾಮ, ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ.
ಚಂಡಮಾರುತದ ಪರಿಣಾಮ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿ ಆಗಾಗ ಬಲವಾದ ಮೇಲ್ಮೈ ಗಾಳಿ ಬೀಸಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನವೆಂಬರ್.2 ಮತ್ತು 3ರಂದು ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.
ನವೆಂಬರ್ 3 ಮತ್ತು 4ರಂದು ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಹಾಗೂ ರಾತ್ರಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಬರ್ಲಿನ್: ಜರ್ಮನಿಯ ಪ್ರಮುಖ ವಾಣಿಜ್ಯ ನಗರ ಫ್ರಾಂಕ್‌ಫರ್ಟ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೀಡಿರುವ ವರದಿಯ ಪ್ರಕಾರ, ದುಷ್ಕರ್ಮಿಗಳು…
ಬೆಂಗಳೂರು: ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ಹೊಸ ಎಸ್‌ಐಆರ್ ಪಟ್ಟಿಯ ಬದಲು ಹಳೆಯ ಮತದಾರರ ಪಟ್ಟಿಯ…
ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ದುರುಪಯೋಗ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿರುವ…
ಕಠ್ಮಂಡು: ನೇಪಾಳದಲ್ಲಿ ಭಾರೀ ಹಿಮಪಾತದಿಂದಾಗಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಭಾರತೀಯ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ…
ವಿಶಾಖಪಟ್ಟಣ: ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾದಲ್ಲಿ ಚಂಡಮಾರುತದ ಆತಂಕ ಎದುರಾಗಿದೆ. ನವೆಂಬರ್ 3ರ ಮುಂಜಾನೆ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ…
ಬೆಂಗಳೂರು: ತಮ್ಮ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳ ವಿರುದ್ಧ ಇಡಿ ಮತ್ತು ಐಟಿ ದಾಳಿ ನಡೆಸಲು ಕೇಂದ್ರ ಸಚಿವರೊಬ್ಬರು ಒತ್ತಡ…