ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ವಾಯುವ್ಯ ದಿಕ್ಕಿಗೆ ಗಾಳಿ ಬಲಗೊಳ್ಳುವ ಸಾಧ್ಯತೆಯಿದೆ. ಚಂಡಮಾರುತ ಶ್ರೀಲಂಕಾ ಮತ್ತು ತಮಿಳುನಾಡು ಕರಾವಳಿಯ ಉತ್ತರ ಮತ್ತು ವಾಯುವ್ಯ ದಿಕ್ಕಿನೆಡೆಗೆ ಸಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ಬಾರಿ ನವೆಂಬರ್‌ನಲ್ಲೇ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಮುಂದಿನ 48 ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಗೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇನ್ನು ವಿಪರೀತ ಚಳಿಯಿಂದ ಜ್ವರ, ಕೆಮ್ಮು, ಶೀತದಂತಹ ಕಾಯಿಲೆಗಳು ಭಾದಿಸಲಿದ್ದು, ಆರೋಗ್ಯದ ಮೇಲೆ ಹೆಚ್ಚಿನ ನಿಗಾ ಇಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…