Mysore
22
clear sky

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಎಫೆಕ್ಟ್: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವ ಪರಿಣಾಮ ಕರ್ನಾಟಕದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಇನ್ನು ಬೆಳಗಾವಿ, ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

 

 

Tags:
error: Content is protected !!