ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏರ್ಪಟ್ಟಿರುವ ಪರಿಣಾಮ ಸಿಲಿಕಾನ್ ಸಿಟಿಯಲ್ಲಿ ಇಂದು ವರ್ಷದ ಮೊದಲ ಮಳೆಯಾಗಿದ್ದು, ರಾಜ್ಯದಲ್ಲಿ ಜನವರಿ.24ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶ್ರೀಲಂಕಾದ ಪೂರ್ವ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಪ್ರಭಾವ ಬೀರಿದ್ದು, ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ಮಳೆಯಾಗಲಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು ಬೆಳ್ಳಂಬೆಳಿಗ್ಗೆಯೇ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇನ್ನು ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಹವಾಮಾನ ಇಲಾಖೆ ರಾಜ್ಯದ ಆರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ಹವಾಮಾನದ ಮೇಲೆ ಚಂಡಮಾರುತದ ಪ್ರಭಾವ ಬೀರಿದೆ.
ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.
ಉಳಿದಂತೆ ಜನವರಿ.24 ರವರೆಗೂ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಶುಷ್ಕ ಹವಾಮಾನ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಇಬ್ಬನಿ ಬೀಳುವ ಮುನ್ಸೂಚನೆ ಲಭ್ಯವಾಗಿದೆ. ಆದರೆ ಬೀದರ್, ಕಲಬುರ್ಗಿ ಮತ್ತು ರಾಯಚೂರು ಜಿಲ್ಲೆಗಳಿಗೆ ತೀವ್ರ ಶೀತ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ನೀಡಿದೆ.
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…