ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹಲವು ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಯಾದಗಿರಿ, ಮೈಸೂರು, ಹಾಸನ, ಕೊಡಗು, ಶಿವಮೊಗ್ಗ, ಬೀದರ್ ಸೇರಿದಂತೆ ಇತರ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





