Mysore
27
few clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಸಿಲಿಂಡರ್‌ ಸ್ಫೋಟ : 9 ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಂಭೀರ

ಹುಬ್ಬಳ್ಳಿ : ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದಿದೆ.

ನಗರದ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಅಡುಗೆ ಅನಿಲದ ಸಿಲಿಂಡರ್‌ ಸ್ಪೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿದ್ದಾರೆ. ಬಹುತೇಕ ಎಲ್ಲರ ದೇಹ ಶೇ 50 ರಷ್ಟು ಸುಟ್ಟು ಹೊಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ 1.30ರ ವೇಳೆಗೆ ಈ ಘಟನೆ ಸಂಭವಿಸಿದ್ದು, ಸಿಲಿಂಡರ್‌ ಸ್ಫೋಟಗೊಂಡ ಕಾರಣ ತಿಳಿದುಬಂದಿಲ್ಲ.‌ ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಾಯಾಳುಗಳನ್ನು ರಾಜು ಹರ್ಲಾಪುರ(21), ಸಂಜಯ್‌ ಸವದತ್ತಿ(20), ವಿನಾಯಕ ಬಾತಕೇರ(12), ಪ್ರಕಾಶ ಬಾತಕೇರ(42), ಮಂಜು ತೋರದ(22), ಅಜ್ಜಾಸ್ವಾಮಿ(58), ಪ್ರವೀಣ ಚಲವಾದಿ(24), ತೇಜಸ್‌ ರೆಡ್ಡಿ(26) ಮತ್ತು ಶಂಕರ ರಾಯನಗೌಡ್ರ(29) ಎಂದು ಗುರುತಿಸಲಾಗಿದೆ.

 

Tags: