ರಾಜ್ಯ

ಡಿ ಗ್ಯಾಂಗ್ ವಿಚಾರಣೆ ಫೆಬ್ರವರಿ.25ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ದರ್ಶನ್‌ ಸೇರಿದಂತೆ ಡಿ ಗ್ಯಾಂಗ್‌ನ ಹಲವು ಆರೋಪಿಗಳು ಕೋರ್ಟ್‌ಗೆ ಹಾಜರಾಗಿದ್ದು, ಫೆಬ್ರವರಿ.27ಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕುರಿತು ವಿಚಾರಣೆಗಾಗಿ ಇಂದು(ಜನವರಿ.10) ಹೈಕೋರ್ಟ್‌ನ 57ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ದರ್ಶನ್‌ ಸೇರಿದಂತೆ ಡಿ ಗ್ಯಾಂಗ್‌ನ ಹಲವು ಆರೋಪಿಗಳು ಮುಖಾಮುಖಿಯಾಗಿದ್ದರು. ಈ ಅರ್ಜಿ ವಿಚಾರಣೆಯನ್ನು ನಡೆಸಿದ 57ನೇ ಸಿಸಿಎಚ್‌ನ ಏಕ ಸದಸ್ಯ ಪೀಠದ ನ್ಯಾಯಾಧೀಶರು ಫೆಬ್ರವರಿ.25ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಹೇಳಿದ್ದಾರೆ.

ಈ‌ ಅರ್ಜಿ ವಿಚಾರಣೆ ಮುಗಿದ ಬಳಿಕ ಆರೋಪಿ ಪವಿತ್ರಾ ಗೌಡ ಕೋರ್ಟ್ ಹಾಲ್‌ನಲ್ಲಿಯೇ ಆರೋಪಿ ದರ್ಶನ್‌ ಅವರನ್ನು ಆರು ತಿಂಗಳ ನಂತರ ನೋಡಿ ಭಾವುಕರಾಗಿದ್ದು, ಆರೋಗ್ಯವನ್ನು ವಿಚಾರಿಸಿದ್ದಾರೆ. ಆ ವೇಳೆ ದರ್ಶನ್‌ ಬೆನ್ನುತಟ್ಟಿ ಸಂತೈಸಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಪವಿತ್ರಾಗೌಡ ಪರ ವಕೀಲರು ಒಂದು ತಿಂಗಳ ಕಾಲ ಹೊರ ರಾಜ್ಯದ ದೇವಾಲಯಗಳಿಗೆ ಪ್ರವಾಸ ಹೋಗುವಂತೆ ಅನುಮತಿ ನೀಡಬೇಕು ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಏನಿದು ಪ್ರಕರಣ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರವಾಗಿ ನಟ ದರ್ಶನ್‌ ಮತ್ತು ಆರೋಪಿ ಪವಿತ್ರಾ ಗೌಡ ಸೇರಿದಂತೆ ಹಲವರಿಗೆ ಕೆಲ ದಿನಗಳ ಹಿಂದೆ ಹೈಕೋರ್ಟ್‌ನ ಏಕ ಸದಸ್ಯ ಪೀಠದಿಂದ ರೆಗ್ಯುಲರ್‌ ಜಾಮೀನನ್ನು ಮಂಜೂರು ಮಾಡಲಾಗಿತ್ತು. ಈ ಜಾಮೀನನ್ನು ನೀಡುವ ವೇಳೆ ಆರೋಪಿಗಳು ಪ್ರತಿ ತಿಂಗಳು ಕೋರ್ಟ್‌ಗೆ ಹಾಜರಾಗುವಂತೆ ಷರತ್ತು ವಿಧಿಸಿತ್ತು. ಈ ವಿಚಾರವಾಗಿ ನಟ ದರ್ಶನ್‌ ಮತ್ತು ಪವಿತ್ರಾ ಸೇರಿದಂತೆ ಇನ್ನುಳಿದ ಆರೋಪಿಗಳು 57ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ಎಲ್ಲ ಆರೋಪಿಗಳು ಮುಖಾಮುಖಿಯಾಗಿ ನ್ಯಾಯಾಧೀಶ ಮುಂದೆ ಹಾಜರಾಗಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

7 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

8 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

9 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

9 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

9 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

9 hours ago