ಬೆಂಗಳೂರು: ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ಕಮಿಷನ್ ಕೇಳಿದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.11) ಬಾಕಿ ಬಿಲ್ ಪಾವತಿ ಮಾಡಲು ಕಮಿಷನ್ ಕೇಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಇಬ್ಬರು ಸಚಿವರಿಗೆ ಪತ್ರ ಬರೆದ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಮಿಷನ್ ಕೇಳಿದರೆ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ನೀಡಲಿ. ಅದನ್ನು ಬಿಟ್ಟು ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಯಾಕೆ ಸಚಿವರನು ಕೇಳಬೇಕು? ಅಲ್ಲದೇ ನಮ್ಮ ಸರ್ಕಾರದ ಸಚಿವರಾದ ಸತೀಶ್ ಜಾರಕಿಹೊಳಿ ಅಥವಾ ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.
2023ರ ವಿಧಾನಸಭೆ ಚುನಾವಣೆಗೂ ಮುನ್ನ ಒಂದು ವರ್ಷ ಮುಂಚಿತವಾಗಿಯೇ ನಮ್ಮ ಪಕ್ಷದಿಂದ ಅನುದಾನ ಇಲ್ಲದೇ ಯಾವುದೇ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದೇವು. ಎಚ್ಚರಿಕೆ ನೀಡಿದ್ದೇವು. ಹೀಗಿದ್ದರೂ ನಮ್ಮ ಮಾತು ಕೇಳದೆ ಈಗ ರಾಜಕೀಯ ನಾಯಕ ಮೂಲಕ ಬಿಲ್ ಪಾವತಿಗೆ ಮನವಿ ಪತ್ ನೀಡುತ್ತಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಮಾಡಿರುವ ಬಗ್ಗೆ ಮಾತನಾಡಿದ ಅವರು, ರಾಜ್ಯದ ಜನರೆಲ್ಲರಿಗೂ ನೀಡುತ್ತೇವೆ. ಜಾತಿ ಗಣತಿ ವರದಿಯನ್ನು ಕ್ಯಾಬಿನೆಟ್ ಸಭೆಯಲ್ಲಿ ಜಸ್ಟ್ ಓಪನ್ ಮಾಡಲಾಗಿದೆ. ಆದರೆ ವರದಿಯನ್ನು ಇನ್ನೂ ಯಾರು ನೋಡಿಲ್ಲ. ಈ ಬಗ್ಗೆ ಪ್ರತ್ಯೇಕ ಚರ್ಚೆ ಮಾಡುತ್ತೇವೆ ಎಂದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…