ರಾಮನಗರ: ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಎಂದು ದೊಡ್ಡ ಹೋರಾಟ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
ರಾಮನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿಕೆಶಿ, ಸಾತನೂರು ಬಳಿ ಜನಸ್ಪಂದನಾ ಸಭೆ ನಡೆಸಿದರು. ಈ ವೇಳೆ ಕ್ಷೇತ್ರದ ಜನರ ಕುಂದುಕೊರತೆ ಆಲಿಸಿ ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.
ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನಕಪುರ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಎಂದು ದೊಡ್ಡ ಪ್ರಯತ್ನ ನಡೆಯುತ್ತಿದೆ. ಈಗ ಮಾತಾಡಿದ್ರೆ ಮಾಧ್ಯಮಗಳು ವಿವಿಧ ರೀತಿಯಲ್ಲಿ ಬಿಂಬಿಸಿ ವರದಿ ಮಾಡುತ್ತವೆ. ನಾನು ಇಲ್ಲಿಗೆ ಶಾಸಕನಾಗಿ ಬಂದಿದ್ದೇನೆ. ನೀವೆಲ್ಲಾ ನಮ್ಮ ಮನೆ ಮಕ್ಕಳು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…
ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…
ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…