Mysore
27
scattered clouds

Social Media

ಮಂಗಳವಾರ, 16 ಜೂನ್ 2026
Light
Dark

ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರಿಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೊಡ್ಡಗೌಡರ ಅಧಿಕೃತ ನಿವಾಸಕ್ಕೆ ಖುದ್ದಾಗಿ ಆಗಮಿಸಿದ ಡಿ.ಕೆ.ಶಿವಕುಮಾರ್‌, ಹಿರಿಯ ಮುತ್ಸದ್ಧಿ ನಾಯಕನಿಗೆ ಗೌರವ ಸಲ್ಲಿಸಿದರು.

ದೇವೇಗೌಡರ ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಆಶೀರ್ವಾದ ಪಡೆದರು. ಇಂದು ಸಂಜೆ ನಡೆಯಲಿರುವ ತಮ್ಮ ಪ್ರಮಾಣದ ಕಾರ್ಯಕ್ರಮಕ್ಕೆ ಬರುವಂತೆ ಅತ್ಯಂತ ಗೌರವಪೂರ್ವಕವಾಗಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಸುಗಮ ಆಡಳಿತಕ್ಕಾಗಿ ಹಿರಿಯದ ಮಾರ್ಗದರ್ಶನ ಮತ್ತು ಸಹಕಾರ ಸದಾ ಇರಬೇಕೆಂದು ಕೋರಿದರು.

 

Tags:
error: Content is protected !!