Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಡಿ.ಕೆ.ಶಿವಕುಮಾರ್‌ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದಾರೆ: ಯತ್ನಾಳ್‌ ಹೊಸ ಬಾಂಬ್‌

ವಿಜಯಪುರ: ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೊತೆಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಚರ್ಚೆ ಮಾಡಿದ್ದಾರೆ. ಈಗಾಗಲೇ ದೆಹಲಿಯಲ್ಲಿ ವಿಜಯೇಂದ್ರ ಜೊತೆ ಸೇರಿ ಒಂದು ಸುತ್ತಿನ ಚರ್ಚೆಯನ್ನೂ ನಡೆಸಿದ್ದಾರೆ. ಒಟ್ಟು 60ರಿಂದ 70 ಕಾಂಗ್ರೆಸ್‌ ಶಾಸಕರನ್ನು ಕರೆತರಲಿದ್ದಾರೆ. ಇದರ ಮುಂದುವರಿದ ಭಾಗವೇ ನಮಸ್ತೇ ಸದಾ ವತ್ಸಲೇ ಹಾಡುತ್ತೇವೆ ಎಂದು ಹೇಳಿದ್ದಾರೆ ಎಂದರು.

ಈ ಮೂಲಕ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಕಡೆ 12 ಶಾಸಕರಿಲ್ಲ ಎಂದು ಆಂತರಿಕ ವರದಿ ಬಂದಿದೆ. ಎಲ್ಲಾ ಸಿದ್ದರಾಮಯ್ಯನವರ ಪರ ಇದ್ದಾರೆ. ಹಾಗಾಗಿ ಸರ್ಕಾರ ಮಾಡಲು ಪ್ರಯತ್ನಿಸಲ್ಲ ಎಂದು ಬಿಜೆಪಿ ಹೇಳಿತು ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

Tags:
error: Content is protected !!