ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಆದಾಯ ಮೀರಿ ಆಸ್ತಿಗಳಿಕೆ ಮಾಡಿದ್ದಾರೆಂದು ಸಿಬಿಐನಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ರಾಜ್ಯ ಸರ್ಕಾರ ಸಿಬಿಐ ತನಿಖೆಯನ್ನು ಹಿಂಪಡೆದಿದೆ. ಇದೀಗ ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆದಾಯ ಮೀರಿ ಆಸ್ತಿಗಳಿಕೆ ಮಾಡಿದ್ದಾರೆಂದು ಸಿಬಿಐನಲ್ಲಿ ದೂರು ದಾಖಲಾಗಿತ್ತು. ಈ ದೂರಿಗೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಆದರೆ, ಸರ್ಕಾರದ ನಿಲುವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಶಾಸಕ ಯತ್ನಾಳ್ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಸಿಬಿಐ ತನಿಖಾ ತಂಡ ಎಚ್ಚೆತ್ತುಕೊಂಡು ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಅರ್ಜಿ ಸಲ್ಲಿಕೆ ಮಾಡಿದೆ. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮತ್ತೊಂದು ದೊಡ್ಡ ಸಂಕಷ್ಟ ಎದುರಾಗಿದೆ.



