Mysore
34
scattered clouds

Social Media

ಸೋಮವಾರ, 16 ಮಾರ್ಚ್ 2026
Light
Dark

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವೆ. ಇಂದಿನ ಔತಣಕೂಟದಲ್ಲಿ ಎಲ್ಲರೂ ಭಾಗಿಯಾಗಲಿದ್ದೇವೆ ಎಂದು ಸಚಿವೆ ಹೇಳಿದರು.

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದೇ ಡಿ.ಕೆ.ಶಿವಕುಮಾರ್‌ ಅವರ ಕನಸಾಗಿತ್ತು. ಅವರ ಕನಸು ನನಸಾಗಿದೆ. ಮುಂದಿನದ್ದು ಏನೇ ಇದ್ದರೂ ಹೈಕಮಾಂಡ್‌ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಹೇಳಿದರು.

 

Tags:
error: Content is protected !!