ಉಡುಪಿ: ಡಿ.ಕೆ.ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಈ ಕುರಿತು ಕಾರ್ಕಳದಲ್ಲಿ ಮಾತನಾಡಿದ ಅವರು, ಡಿಕೆ ಬೆಂಬಲಿಗರು ಏನನ್ನೂ ಮಾತನಾಡದೇ ಸುಮ್ಮನಿರಬೇಕು. ಡಿಕೆಶಿ ಸಿಎಂ ಆಗುವುದು ಜನರ ಮನಸ್ಸಿನಲ್ಲಿ ತೀರ್ಮಾನವಾಗಿದೆ. ಇತಿಹಾಸ ತೀರ್ಮಾನ ಮಾಡಿದೆ. ಮ್ಯಾಟರ್ ಆಫ್ ಟೈಮ್ ಅಷ್ಟೇ ಎಂದು ತಿಳಿಸಿದರು.
ಡಿಕೆಶಿಗೆ ಪ್ರಥಮ ಬಾರಿ ಎಂಎಲ್‌ಎ ಡಿಕೆಟ್ ಕೊಡಿಸಿದವನು ನಾನು. ಇಂದು ಯಶಸ್ವಿ ನಾಯಕನಾಗಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ. ಡಿಕೆಶಿ ಸದ್ಯದಲ್ಲೇ ಸಿಎಂ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಇನ್ನು ಡಿಕೆಶಿ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ. ರಾಷ್ಟ್ರದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ ಧೀಮಂತ ನಾಯಕ ಎಂದು ಹಾಡಿ ಹೊಗಳಿದರು.





