ರಾಜ್ಯ

ಡಿಕೆಶಿ ಸಿಎಂ ಆಗೋದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

ಉಡುಪಿ: ಡಿ.ಕೆ.ಶಿವಕುಮಾರ್‌ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಈ ಕುರಿತು ಕಾರ್ಕಳದಲ್ಲಿ ಮಾತನಾಡಿದ ಅವರು, ಡಿಕೆ ಬೆಂಬಲಿಗರು ಏನನ್ನೂ ಮಾತನಾಡದೇ ಸುಮ್ಮನಿರಬೇಕು. ಡಿಕೆಶಿ ಸಿಎಂ ಆಗುವುದು ಜನರ ಮನಸ್ಸಿನಲ್ಲಿ ತೀರ್ಮಾನವಾಗಿದೆ. ಇತಿಹಾಸ ತೀರ್ಮಾನ ಮಾಡಿದೆ. ಮ್ಯಾಟರ್‌ ಆಫ್‌ ಟೈಮ್‌ ಅಷ್ಟೇ ಎಂದು ತಿಳಿಸಿದರು.

ಡಿಕೆಶಿಗೆ ಪ್ರಥಮ ಬಾರಿ ಎಂಎಲ್‌ಎ ಡಿಕೆಟ್‌ ಕೊಡಿಸಿದವನು ನಾನು. ಇಂದು ಯಶಸ್ವಿ ನಾಯಕನಾಗಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ. ಡಿಕೆಶಿ ಸದ್ಯದಲ್ಲೇ ಸಿಎಂ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಇನ್ನು ಡಿಕೆಶಿ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ. ರಾಷ್ಟ್ರದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ ಧೀಮಂತ ನಾಯಕ ಎಂದು ಹಾಡಿ ಹೊಗಳಿದರು.

AddThis Website Tools
ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಂರ ಮೀಸಲಾತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…

3 hours ago

ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ

ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…

3 hours ago

ಒಂದು ತಿಂಗಳು ʼಜಲ ಸಂರಕ್ಷಣಾ ಅಭಿಯಾನʼ: ಡಿಕೆ ಶಿವಕುಮಾರ್‌

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…

3 hours ago

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…

4 hours ago

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…

4 hours ago

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…

5 hours ago