Mysore
30
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಡಿ.ಕೆ.ಶಿವಕುಮಾರ್‌ ಬಲಾಬಲ ಪ್ರದರ್ಶಿಸುವ ವ್ಯಕ್ತಿಯಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

D.K. Shivakumar is Not Someone Who Shows Off Power: Former MP D.K. Suresh

ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಶಾಸಕರ ಬೆಂಬಲ ಕೇಳುವುದು ಸರಿಯಲ್ಲ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಐದು ವರ್ಷ ನಾನೇ ಸಿಎಂ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ. ನನಗೆ ಬೆಂಬಲವಿರುವ ಶಾಸಕರಷ್ಟು ಡಿಕೆಶಿಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು, ರಾಜಕಾರಣದಲ್ಲಿ ನಿವೃತ್ತಿ ಎನ್ನುವ ವಿಚಾರವೇ ಇಲ್ಲ. ಡಿ.ಕೆ.ಶಿವಕುಮಾರ್‌ ಸದ್ಯ ಕೆಪಿಸಿಸಿ ಅಧ್ಯಕ್ಷರು ಆಗಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಶಾಸಕರ ಬೆಂಬಲ ಕೇಳುವುದು ಸರಿಯಲ್ಲ. ಈಗ ಸಿದ್ದರಾಮಯ್ಯ ಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಇನ್ನು ಡಿ.ಕೆ.ಶಿವಕುಮಾರ್‌ ಒಬ್ಬ ಕಾರ್ಯಕರ್ತ. ಡಿಕೆಶಿ ಬಲಾಬಲ ಪ್ರದರ್ಶಿಸುವ ವ್ಯಕ್ತಿಯಲ್ಲ. ಕಾಂಗ್ರೆಸ್‌ನಲ್ಲಿ ಯಾವುದೇ ಜಗಳ ಇಲ್ಲ. ಈ ಬಗ್ಗೆ ವರಿಷ್ಠರು ಹಾಗೂ ಸಿಎಂ ಸ್ಪಷ್ಟಪಡಿಸಿದ್ದಾರೆ. ಆದರೂ ಯಾಕೆ ಗೊಂದಲ ಆಗಿದೆ ಎಂದು ಅರ್ಥ ಆಗುತ್ತಿಲ್ಲ ಎಂದರು.

Tags:
error: Content is protected !!