D.K. Shivakumar is Not Someone Who Shows Off Power: Former MP D.K. Suresh
ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಶಾಸಕರ ಬೆಂಬಲ ಕೇಳುವುದು ಸರಿಯಲ್ಲ ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ.
ಐದು ವರ್ಷ ನಾನೇ ಸಿಎಂ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ. ನನಗೆ ಬೆಂಬಲವಿರುವ ಶಾಸಕರಷ್ಟು ಡಿಕೆಶಿಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ರಾಜಕಾರಣದಲ್ಲಿ ನಿವೃತ್ತಿ ಎನ್ನುವ ವಿಚಾರವೇ ಇಲ್ಲ. ಡಿ.ಕೆ.ಶಿವಕುಮಾರ್ ಸದ್ಯ ಕೆಪಿಸಿಸಿ ಅಧ್ಯಕ್ಷರು ಆಗಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಶಾಸಕರ ಬೆಂಬಲ ಕೇಳುವುದು ಸರಿಯಲ್ಲ. ಈಗ ಸಿದ್ದರಾಮಯ್ಯ ಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಇನ್ನು ಡಿ.ಕೆ.ಶಿವಕುಮಾರ್ ಒಬ್ಬ ಕಾರ್ಯಕರ್ತ. ಡಿಕೆಶಿ ಬಲಾಬಲ ಪ್ರದರ್ಶಿಸುವ ವ್ಯಕ್ತಿಯಲ್ಲ. ಕಾಂಗ್ರೆಸ್‌ನಲ್ಲಿ ಯಾವುದೇ ಜಗಳ ಇಲ್ಲ. ಈ ಬಗ್ಗೆ ವರಿಷ್ಠರು ಹಾಗೂ ಸಿಎಂ ಸ್ಪಷ್ಟಪಡಿಸಿದ್ದಾರೆ. ಆದರೂ ಯಾಕೆ ಗೊಂದಲ ಆಗಿದೆ ಎಂದು ಅರ್ಥ ಆಗುತ್ತಿಲ್ಲ ಎಂದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…