ರಾಜ್ಯ

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ ಡಿ.ಕೆ ಶಿವಕುಮಾರ್‌

ಬೆಂಗಳೂರು : ಸದ್ಯ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಆರ್‌ಎಸ್‌ಎಸ್ ಗೀತೆಯನ್ನು ಹಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಚ್ಚರಿ ಮೂಡಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜೀವಗಳನ್ನು ಬಲಿ ಪಡೆದ ಕಾಲ್ತುಳಿತದ ಕುರಿತು ವಿಧಾನಸಭೆಯಲ್ಲಿ ಚರ್ಚೆಯ ಸಮಯದಲ್ಲಿ ಡಿಕೆಶಿ ಎಲ್ಲರ ಅಚ್ಚರಿಗೆ ಕಾರಣರಾದರು.

ಬಿಜೆಪಿ ಶಾಸಕರು ಜೋರಾಗಿ ಮೇಜು ಬಡಿಯುವ ಮೂಲಕ ಇದನ್ನು ಸ್ವಾಗತಿಸಿದರು, ಆದರೆ ಕಾಂಗ್ರೆಸ್ ಸದಸ್ಯರು ಮೌನವಾಗಿ ಕುಳಿತರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಉಂಟಾಗಲು ಶಿವಕುಮಾರ್ ಕಾರಣ ಎಂದು ಬಿಜೆಪಿ ಸದಸ್ಯರು ಆರೋಪಿಸಿದ ನಂತರ ಈ ಪ್ರಸಂಗ ನಡೆಯಿತು. ವಿಮಾನ ನಿಲ್ದಾಣದಿಂದ ಕ್ರೀಡಾಂಗಣಕ್ಕೆ ಆರ್‌ಸಿಬಿ ತಂಡದೊಂದಿಗೆ ಕನ್ನಡ ಧ್ವಜ ಬೀಸುತ್ತಾ ಮಾರ್ಗದುದ್ದಕ್ಕೂ ಡಿಕೆಶಿ ಸಂಭ್ರಮಿಸಿದ್ದರು ಎಂದು ವಿಪಕ್ಷ ನಾಯಕರು ಆರೋಪಿಸಿದರು.

ತಮ್ಮನ್ನು ತಾವು ಸಮರ್ಥಿಸಿಕೊಳ್ಳುತ್ತಾ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಸದಸ್ಯರಾಗಿ ಮತ್ತು ಬೆಂಗಳೂರಿನ ಉಸ್ತುವಾರಿ ಸಚಿವರಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ ಎಂದು ಶಿವಕುಮಾರ್ ಹೇಳಿದರು. “ನಾನು ಅವರಿಗೆ (ಆರ್‌ಸಿಬಿ) ಶುಭ ಹಾರೈಸಿದೆ, ನಾನು ಕಪ್ ಅನ್ನು ಸಹ ಮುತ್ತಿಟ್ಟೆ. ನಾನು ನನ್ನ ಕೆಲಸವನ್ನು ಮಾಡಿದ್ದೇನೆ’ ಎಂದು ಅವರು ಹೇಳಿದರು. ಈ ರೀತಿಯ ಅಪಘಾತಗಳು ಇತರ ರಾಜ್ಯಗಳಲ್ಲಿಯೂ ಸಂಭವಿಸಿವೆ ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಒಮ್ಮೆ “ಆರ್‌ಸ್ಎಸ್ ಚಡ್ಡಿ’ ಧರಿಸಿದ್ದಾಗಿ ಒಪ್ಪಿಕೊಂಡಿದ್ದನ್ನು ನೆನಪಿಸಿದಾಗ, ಶಿವಕುಮಾರ್ ಇದ್ದಕ್ಕಿದ್ದಂತೆ ಆರ್‌ಸ್ಎಸ್ ಗೀತೆ ಹಾಡಿದರು.

‘ನಮಸ್ತೆ ಸದಾ ವತ್ಸಲೆ ಮಾತೃಭೂಮಿ…’ ಎಂದು ಹಾಡುತ್ತಿದ್ದಂತೆ ಬಿಜೆಪಿ ಶಾಸಕರು ಮೇಜು ತಟ್ಟಿದರು. ಸ್ಪೀಕರ್ ಯು.ಟಿ ಖಾದರ್ ಅವರು ಚೆನ್ನಾಗಿದೆ ಎಂದರು. ಈ ಸಾಲುಗಳನ್ನು ದಾಖಲೆಗಳಿಂದ ತೆಗೆದುಹಾಕಬಾರದು ಎಂದು ಆಶಿಸುತ್ತೇನೆ ಎಂದು ಬಿಜೆಪಿ ಶಾಸಕರೊಬ್ಬರು ನಗೆಯಾಡಿದರು.

ಆಂದೋಲನ ಡೆಸ್ಕ್

Recent Posts

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

3 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

9 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

9 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

9 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

9 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

9 hours ago