Mysore
15
scattered clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಆದಷ್ಟು ಬೇಗ ಡಿಕೆಶಿ ಮುಖ್ಯಮಂತ್ರಿಯಾಗಲಿದ್ದಾರೆ: ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಶಾಕಿಂಗ್ ಹೇಳಿಕೆ

ಗದಗ: ಆದಷ್ಟು ಬೇಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯ ಲಕ್ಷ್ಮೇಶ್ವರ ಮುಕ್ತಿ ಮಂದಿರ ಸಮಾರಂಭದಲ್ಲಿ ಭಾಷಣ ಮಾಡುವ ವೇಳೆ ಮಾತನಾಡಿದ ಅವರು,  ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಅಭಿಮಾನಿ ಬಣದಲ್ಲಿ ಪರ-ವಿರೋಧಗಳು ಉಂಟಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಲಕ್ಷ್ಮೇಶ್ವರ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ನನೆಗುದಿಗೆ ಬಿದ್ದಿದೆ. ಇದಕ್ಕೆಲ್ಲಾ ಸುಮಾರು 15 ಕೋಟಿ ರೂ.ಗಳಷ್ಟು ವೆಚ್ಚವಾಗುತ್ತದೆ. ಅಲ್ಲದೇ ಶ್ರೀಮಠ ಮಗನಾದ ಗಂಗಾಧರ ಶಿವಾಚಾರ್ಯರ ಆರ್ಶೀವಾದ ಪಡೆದ ವೇಳೆ ಡಿ.ಕೆ.ಶಿವಕುಮಾರ್‌ ಅವರಿಗೆ ತ್ರಿಕೋಟಿ ಲಿಂಗ ಸ್ಥಾಪನೆ ಬಗ್ಗೆ ಹೇಳಲಾಗಿದೆ. ಈ ಬಗ್ಗೆ ಶಿವಕುಮಾರ್‌ ಅವರು ಲಿಂಗ ಸ್ಥಾಪನೆಗೆ ಬೇಕಾಗುವ ಕೋಟ್ಯಂತರ ರೂಪಾಯಿಯನ್ನು ಅನುದಾನ ಮೂಲಕ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಮೊದಲ ಹಂತದಲ್ಲಿ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದ್ದಾರೆ. ಆದರೆ, ಇದೀಗ ಕಾರಣಾಂತರಗಳಿಂದ ಸ್ವಲ್ಪ ತಡವಾಗಿದೆ. ಆದಷ್ಟು ಬೇಗ ಗುರುಗಳ ಸಂಕಲ್ಪ ಪೂರ್ಣಗೊಳಿಸೋಣ ಎಂದು ತಿಳಿಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗಲಿ. ಆ ಬಳಿಕ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ನಂತರ ಮುಕ್ತಿ ಮಂದಿರಕ್ಕೆ ಕರೆದುಕೊಂಡು ಬಂದು ಈ ನಾಡಿಗೆ ತೋರಿಸೋಣ ಎಂದು ಹೇಳಿದ್ದಾರೆ.

 

 

Tags:
error: Content is protected !!