ಗದಗ: ಆದಷ್ಟು ಬೇಗ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಲಕ್ಷ್ಮೇಶ್ವರ ಮುಕ್ತಿ ಮಂದಿರ ಸಮಾರಂಭದಲ್ಲಿ ಭಾಷಣ ಮಾಡುವ ವೇಳೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿ ಬಣದಲ್ಲಿ ಪರ-ವಿರೋಧಗಳು ಉಂಟಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಲಕ್ಷ್ಮೇಶ್ವರ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ನನೆಗುದಿಗೆ ಬಿದ್ದಿದೆ. ಇದಕ್ಕೆಲ್ಲಾ ಸುಮಾರು 15 ಕೋಟಿ ರೂ.ಗಳಷ್ಟು ವೆಚ್ಚವಾಗುತ್ತದೆ. ಅಲ್ಲದೇ ಶ್ರೀಮಠ ಮಗನಾದ ಗಂಗಾಧರ ಶಿವಾಚಾರ್ಯರ ಆರ್ಶೀವಾದ ಪಡೆದ ವೇಳೆ ಡಿ.ಕೆ.ಶಿವಕುಮಾರ್ ಅವರಿಗೆ ತ್ರಿಕೋಟಿ ಲಿಂಗ ಸ್ಥಾಪನೆ ಬಗ್ಗೆ ಹೇಳಲಾಗಿದೆ. ಈ ಬಗ್ಗೆ ಶಿವಕುಮಾರ್ ಅವರು ಲಿಂಗ ಸ್ಥಾಪನೆಗೆ ಬೇಕಾಗುವ ಕೋಟ್ಯಂತರ ರೂಪಾಯಿಯನ್ನು ಅನುದಾನ ಮೂಲಕ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮೊದಲ ಹಂತದಲ್ಲಿ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದ್ದಾರೆ. ಆದರೆ, ಇದೀಗ ಕಾರಣಾಂತರಗಳಿಂದ ಸ್ವಲ್ಪ ತಡವಾಗಿದೆ. ಆದಷ್ಟು ಬೇಗ ಗುರುಗಳ ಸಂಕಲ್ಪ ಪೂರ್ಣಗೊಳಿಸೋಣ ಎಂದು ತಿಳಿಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲಿ. ಆ ಬಳಿಕ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ನಂತರ ಮುಕ್ತಿ ಮಂದಿರಕ್ಕೆ ಕರೆದುಕೊಂಡು ಬಂದು ಈ ನಾಡಿಗೆ ತೋರಿಸೋಣ ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…