Mysore
27
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಡಿಕೆಶಿಗೆ ಮೇ.15ರೊಳಗೆ ಸಿಗಲಿದೆ ಸಿಹಿಸುದ್ದಿ: ಕುಣಿಗಲ್‌ ಶಾಸಕ ರಂಗನಾಥ್‌ ವಿಶ್ವಾಸ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್‌ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಫಲಾಫಲಗಳನ್ನು ದೇವರಿಗೆ ಬಿಡಬೇಕು. ಅದೇ ರೀತಿ ನಮ್ಮ ಡಿ.ಕೆ.ಶಿವಕುಮಾರ್‌ ಸಾಹೇಬರು ಪಕ್ಷದ ಜವಾಬ್ದಾರಿಯನ್ನು ಹೊತ್ತು ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಬರುವ ದಿನಗಳಲ್ಲಿ ಒಳ್ಳೆಯ ಸ್ಥಾನ ಸಿಗಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆಯಾಗಿದೆ ಎಂದು ಹೇಳಿದರು.

ಮೇ.15ರಂದು ಡಿ.ಕೆ.ಶಿವಕುಮಾರ್‌ ಅವರ ಜನ್ಮದಿನವಿದೆ. ಅಷ್ಟರೊಳಗೆ ಅವರಿಗೆ ಯಾವುದಾದರೂ ಸಂತೋಷದ ವಿಚಾರ ಅಥವಾ ಸಿಹಿ ಸುದ್ದಿ ಬರಬಹುದು ಎಂಬ ಆಶಯ ನಮ್ಮದಾಗಿದೆ ಎಂದು ಹೇಳಿದರು.

 

Tags:
error: Content is protected !!