D K Suresh
ಬೆಂಗಳೂರು: ಐಶ್ವರ್ಯಗೌಡ ವಿರುದ್ಧ ಚಿನ್ನವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ. ಸುರೇಶ್‌ರನ್ನು ಜಾರಿ ನಿರ್ದೇಶನಾಲಯ ಎರಡನೇ ಬಾರಿಗೆ ವಿಚಾರಣೆಗೊಳಪಡಿಸಿದೆ.
ಐಶ್ವರ್ಯಗೌಡ ಹಲವಾರು ಮಂದಿಗೆ ಚಿನ್ನವ್ಯಾಪಾರದ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದರು. ಈ ವೇಳೆ ಆಕೆ ತಾವು ಡಿ.ಕೆ. ಸುರೇಶ್‍ರವರ ಸಹೋದರಿ ಎಂದು ಹೇಳಿಕೊಂಡಿದ್ದರು. ನಟರೊಬ್ಬರು ಡಿ.ಕೆ. ಸುರೇಶ್‍ರವರ ಧ್ವನಿಯನ್ನು ಮಿಮಿಕ್ರಿ ಮಾಡಿ ಉದ್ಯಮಿಗಳ ಜೊತೆ ಮಾತನಾಡಿದ್ದರು. ಬಹುಕೋಟಿ ಹಗರಣವನ್ನು ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಡಿ.ಕೆ.ಸುರೇಶ್‍ರವರಿಗೆ ನೋಟೀಸ್ ನೀಡಿತ್ತು.
ಕಳೆದ ಜೂ.23 ರಂದು ಡಿ.ಕೆ.ಸುರೇಶ್ ವಿಚಾರಣೆಗೆ ಹಾಜರಾಗಿದ್ದರು. ಮತ್ತಷ್ಟು ಮಾಹಿತಿ ಸಂಗ್ರಹಕ್ಕಾಗಿ ಜಾರಿ ನಿರ್ದೇಶನಾಲಯ ಎರಡನೇ ಬಾರಿ ನೋಟೀಸ್ ನೀಡಿದ್ದು, ಅದರಂತೆ ಇಂದು ಡಿ.ಕೆ. ಸುರೇಶ್ ವಿಚಾರಣೆಗೆ ಹಾಜರಾಗಿದ್ದರು. ಅವರ ಜೊತೆ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮತ್ತಿತರರು ಹಾಜರಿದ್ದರು.
ಆದರೆ ಎಲ್ಲರನ್ನೂ ಹೊರಗಿರಿಸಿ ಡಿ.ಕೆ. ಸುರೇಶ್‍ರವರನ್ನು ಮಾತ್ರ ಕಚೇರಿ ಒಳಗೆ ಕರೆದುಕೊಂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುದೀರ್ಘವಾಗಿ ವಿಚಾರಣೆ ನಡೆಸಿದ್ದಾರೆ. ಹಲವು ರೀತಿಯ ಪ್ರಶ್ನೆಗಳನ್ನು ಡಿ.ಕೆ.ಸುರೇಶ್‍ಗೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಐಶ್ವರ್ಯಗೌಡ ಅವರ ವಂಚನೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಡಿ.ಕೆ. ಸುರೇಶ್ ಹಲವಾರು ಬಾರಿ ಪ್ರಸ್ತಾಪಿಸಿದ್ದಾರೆ. ಆಕೆಯ ವಿರುದ್ಧ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಡಿ.ಕೆ.ಸುರೇಶ್ ದೂರು ನೀಡಿದ್ದರು. ಅದರ ಹೊರತಾಗಿಯೂ ಜಾರಿ ನಿರ್ದೇಶನಾಲಯ ವಿಚಾರಣೆ ಮುಂದುವರೆಸಿದ್ದು, ಇಂದು ಕೂಡ ವಿಚಾರಣೆ ನಡೆಸಿದೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…