ರಾಮನಗರ: ಈ ಬಾರಿಯ ಕೇಂದ್ರ ಬಜೆಟ್ ಬಿಹಾರಕ್ಕೆ ಬಂಪರ್ ಅನುದಾನ ನೀಡಿ, ನಮ್ಮ ರಾಜ್ಯಕ್ಕೆ ಬೋಗಸ್ ಮತ್ತು ಬಂಡಲ್ ಬಜೆಟ್ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಚನ್ನಪಟ್ಟದಲ್ಲಿ ಇಂದು(ಫೆಬ್ರವರಿ.2) ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದಕ್ಷಿಣ ಭಾರತಕ್ಕೆ ಅನ್ಯಾಯ ಮಾಡಿದ್ದಾರೆ. ನಮ್ಮ ರಾಜ್ಯದಿಂದ 5 ಲಕ್ಷ ಕೋಟಿ ರೂ. ಅಧಿಕ ತೆರಿಗೆ ಕೇಂದ್ರದ ಖಾತೆಗೆ ಜಮಾ ಆಗುತ್ತಿದೆ. ಆದರೆ ನಮ್ಮ ರಾಜ್ಯಕ್ಕೆ ಕೇಂದ್ರದಿಂದ ಯಾವುದೇ ಯೋಜನೆಗೆ ಅನುಮೋದನೆ ನೀಡಿಲ್ಲ. ಇದನ್ನು ಸರಿಪಡಿಸದಿದ್ದರೆ ಬಹುಶಃ ಅನುದಾನಕ್ಕಾಗಿ ಬೇರೆ ಬೇರೆ ರೀತಿಯಲ್ಲಿ ಆಗ್ರಹಿಸಬೇಕಾಗುತ್ತದೆ. ಬಳಿಕ ಕೇಂದ್ರಕ್ಕೆ ಅದನ್ನು ಕಷ್ಟವಾಗಬಹುದು. ಕೇಂದ್ರ ಸರ್ಕಾರಕ್ಕೆ ಕೇವಲ ಚುನಾವಣೆಯಷ್ಟೇ ಮುಖ್ಯ. ಅವರಿಗೆ ಅಭಿವೃದ್ಧಿ ವಿಚಾರ ಮುಖ್ಯ ಅಲ್ಲ ಎಂದು ವಾಗ್ದಾಳಿ ನಡೆಸಿದರು.
ಈ ಬಜೆಟ್‌ನಿಂದ ಮಧ್ಯಮ ವರ್ಗಕ್ಕೆ ಒಂದಿಷ್ಟು ತೆರಿಗೆ ವಿನಾಯಿತಿ ನೀಡಿದ್ದು, ರೈತರು, ಮಹಿಳೆಯರು, ಯುವಜನತೆ ಹಾಗೂ ದಲಿತರ ಹೆಸರು ಹೇಳಿದ್ದಾರೆ. ಆದರೆ ನೊಂದಿರುವ ಸಾರ್ವಜನಿಕರಿಗೆ ಯಾವ ರೀತಿಯ ಯೋಜನೆ ಮಾಡುತ್ತೇವೆ ಎಂದು ಹೇಳಿಲ್ಲ. ಹೀಗಾಗಿ ಕನ್ನಡಿಗರು ಎಚ್ಚೆತ್ತುಕೊಳ್ಳುವ ಕಾಲ ಹತ್ತಿರ ಬಂದಿದೆ. ಇದು ರಾಜಕೀಯ ಹೇಳಿಕೆ ಅಲ್ಲ. ಕನ್ನಡಿಗರು ಮಲಗಿದರೆ ನಮ್ಮನ್ನು ಮುಗಿಸುತ್ತಾರೆ. ಕರ್ನಾಟಕದ ನಿಮ್ಮ ಮಕ್ಕಳನ್ನು ಬೇರೆಯವರು ಆಳುವ ಸ್ಥಿತಿ, ಬೇರೆಯವರ ಹತ್ರ ಕೂಲಿ ಮಾಡುವ ಪರಿಸ್ಥಿತಿ ಬರುತ್ತದೆ ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…