ರಾಜ್ಯ

ಮುಡಾ ಹಗರಣ: ಬಿಜೆಪಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ: ಸಚಿವ ಡಿ.ಸುಧಾಕರ್‌

ಹುಬ್ಬಳ್ಳಿ: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಅವರಿಗೆ ಮಾಡಲು ಬೇರೇನು ಕೆಲಸವಿಲ್ಲ ಹೀಗಾಗಿ ಅವರು ಈ ರೀತಿಯಾಗಿ ಮಾಡುತ್ತಿದ್ದಾರೆ ಎಂದು ಸಚಿವ ಡಿ. ಸುಧಾಕರ್‌ ಅವರು ಟಾಂಗ್‌ ನೀಡಿದ್ದಾರೆ.

ಮೈಸೂರಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಯಾವುದೇ ಉರುಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸಿಎಂ ಅವರು ತಮ್ಮ ರಾಜಕೀಯ ಇತಿಹಾಸದಲ್ಲಿ ಕಳಂಕ ರಹಿತವಾಗಿ ಆಡಳಿತ ಮಾಡಿದ್ದಾರೆ. ಅವರು ನಿವೇಶನದ ವಿಚಾರವಾಗಿ ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಬಿಜೆಪಿಯವರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

ಈಗ ಆರೋಪ ಮಾಡುತ್ತಿರುವ ಬಿಜೆಪಿ ಕಾಲಾವಧಿಯಲ್ಲಿಯೂ ಮುಡಾದಲ್ಲಿ ಹಗರಣ ನಡೆದಿದೆ. ಇದನ್ನು ಸೇರಿ ತನಿಖೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದು, ಬಿಜೆಪಿ ಈ ರೀತಿಯಾಗಿ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನು ವಾಲ್ಮೀಕಿ ಹಗರಣ ವಿಚಾರವಾಗಿ ಮಾತನಾಡಿ, ಇದು ಬ್ಯಾಂಕ್‌ ಹಾಗೂ ಕಾರ್ಪೋರೇಷನ್‌ಗೆ ಸಂಬಂಧಿಸಿದ್ದಾಗಿದೆ. ರಾಜ್ಯ ಸರ್ಕಾರ ಕೂಡಾ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದ್ದು, ತನಿಖೆ ನಡೆಯುತ್ತಿದೆ. ಈ ಬಗ್ಗೆ ಈಗಲೇ ಹೆಚ್ಚೇನು ಮಾತನಾಡಲಾರೇ ಎಂದು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago