ಬೆಂಗಳೂರು: ಜಾತಿ ಗಣತಿ (caste census) ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ (D. V. Sadananda Gowda) ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇದೇ ಏಪ್ರಿಲ್.17ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು, ಜಾತಿ ಗಣತಿ ವರದಿಯಲ್ಲಿ ಒಕ್ಕಲಿಗೆ ಸಮುದಾಯಕ್ಕೆ ಅನ್ಯಾಯವಾದರೆ ಒಕ್ಕಲಿಗೆ ಸಮುದಾಯ ಸಿಡಿದೇಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಿನ್ನೆಲೆ: ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಬಗ್ಗೆ ಚರ್ಚಿಸಿ ನಿರ್ದಾರ: ಸಿ.ಎಂ ಸಿದ್ದರಾಮಯ್ಯ
ಇನ್ನು ಮುಂದುವರಿದು ಮಾತನಾಡಿದ ಅವರು ಇಂದು ಸ್ಮಾರ್ಟ್ ಸಿಟಿ ಆಗಬೇಕಾದರೆ ಕಾರಣ ನಮ್ಮ ಕೆಂಪೇಗೌಡರು. ನಾವು ಜಾತಿಗಣತಿ ವಿರೋಧಿಗಳಲ್ಲ. ಆದರೆ ತಪ್ಪು ಲೆಕ್ಕದಿಂದ ಶಕ್ತಿ ಕುಂದಿಸಲು ಆಗಲ್ಲ. ಒಕ್ಕಲಿಗೆ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುವುದು ಖಚಿತ ಎಂದು ಎಚ್ಚರಿಕೆ ನೀಡಿದರು.
ಇದನ್ನು ಓದಿ: ಇದು ಜಾತಿಗಣತಿಯೋ, ದ್ವೇಷಗಣತಿಯೋ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ





