ರಾಜ್ಯ

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು ದೃಶ್ಯಗಳ ಬಗ್ಗೆ ಬಿಸಿಬಿಸಿ ಚರ್ಚೆ ಒಂದೆಡೆಯಾಗುತ್ತಿದ್ದರೆ, ಅದರಲ್ಲಿ ಹೀರೋ ಯಶ್ ಹೇಳುವ ಡ್ಯಾಡಿ ಈಸ್ ಹೋಂ ಡೈಲಾಗ್ ಭಾರೀ ಫೇಮಸ್ ಆಗಿದೆ.

ಇದೀಗ ಟಾಕ್ಸಿಕ್ ಸಿನಿಮಾ ಟೀಸರ್ ಮಾದರಿಯಲ್ಲಿಯೇ ಮಾಜಿ ಸಿಎಂ ಕೇಂದ್ರ ಸಚಿವ ಎಚ್‍ಡಿ ಕುಮಾರಸ್ವಾಮಿ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ AI ಮೂಲಕ ವಿಡಿಯೋ ಒಂದನ್ನು ಎಡಿಟ್ ಮಾಡಿ ಹರಿ ಬಿಟ್ಟಿದ್ದು, ಭಾರಿ ವೈರಲ್ ಆಗಿದೆ. ಇಲ್ಲಿ ಡೈಲಾಗ್ ರಾಜ್ಯ ರಾಜಕಾರಣಕ್ಕೆ, 2028ರ ಚುನಾವಣೆಗೆ ಸಂಬಂಧಿಸಿ ಇದೆ.

ಎಐ ಸೃಷ್ಟಿತ ವಿಡಿಯೊದಲ್ಲಿ ನಾವು ಈ ರಾಜ್ಯವನ್ನು ಶಾಂತಿಯುತವಾಗಿ ಲೂಟಿ ಮಾಡಲು ಬಯಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರೆ, ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯಕ್ಕೆ ಮರಳುತ್ತಾರೆಂದು ನಿಮಗೆ ಅನಿಸುತ್ತಿದೆಯೇ ಎಂದು ಕೇಳುತ್ತಾರೆ. ಆಗ ಡಿಕೆ ಶಿವಕುಮಾರ್ ನನಗನ್ನಿಸುವುದಿಲ್ಲ ಸರ್ ಎಂದಾಗ ಕಾರಿನಲ್ಲಿ ಎಚ್.ಡಿ ಕುಮಾರಸ್ವಾಮಿ ರಾಯಲ್ ಎಂಟ್ರಿ ಕೊಡ್ತಾರೆ. ಅವರು ಇಲ್ಲಿಗೆ ಬರಬಾರದಿತ್ತು ಎಂದು ಡಿಕೆ ಶಿವಕುಮಾರ್ ಹೇಳುತ್ತಾರೆ. ಕೊನೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಡ್ಯಾಡಿ ಇಸ್ ಹೋಂ ಎಂದು ಡೈಲಾಗ್ ಹೇಳುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್‌, ಜೆಡಿಎಸ್‌ ಬಿಜೆಪಿಯೊಂದಿಗೆ ವೀಲಿನವಾಗಲಿದೆ, ಕರ್ನಾಟಕದಲ್ಲಿ 2 ಪಕ್ಷಗಳು ಇರಲಿದೆ ಎಂಬ ಮಾತುಗಳನ್ನಾಡಿದ್ದರು. ಇದಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದರು. ಇದರ ಬೆನ್ನಲ್ಲೇ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣದತ್ತ ಚಿತ್ತ ಹರಿಸಿದ್ದಾರೆ ಎನ್ನಲಾಗಿದೆ. 2028 ರ ಮಹಾ ಕದನಕ್ಕೆ ದಿಲ್ಲಿ ಮಟ್ಟದಲ್ಲೇ ರಣತಂತ್ರ ರೂಪಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

7 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

7 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

7 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

7 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

7 hours ago