ರಾಜ್ಯ

ಶಾಸಕರೊಂದಿಗೆ ಪ್ರತಿದಿನ ಬ್ರೇಕ್‌ಫಾಸ್ಟ್‌ ಮೀಟಿಂಗ್‌ : ಡಿಕೆಶಿ

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಉಪಹಾರ ಸಭೆ ನಡೆಸಿ, ಅವರ ಕುಂದುಕೊರತೆಗಳು, ದೂರುಗಳು ಮತ್ತು ಸಲಹೆಗಳನ್ನು ಆಲಿಸುವುದಾಗಿ ಹೇಳಿದ್ದಾರೆ.

ಈ ಕ್ರಮವು ಕೆಲವು ಶಾಸಕರು ಮತ್ತು ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಉಂಟಾಗಿರುವ ಅಸಮಾಧಾನವನ್ನು ತಡೆಗಟ್ಟುವ ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅವರನ್ನು ಒಂದುಗೂಡಿಸುವ ಗುರಿಯನ್ನು ಹೊಂದಿದೆ.

ಎಲ್ಲ ಶಾಸಕರಿಗೂ ಸಮಯದ ಬಗ್ಗೆ ಗೊಂದಲವಿತ್ತು. ಬೆಳಗ್ಗೆ 10ರಿಂದ 10.30ರವರೆಗೆ ಸಮಯ ನಿಗದಿ ಮಾಡಿದ್ದೇನೆ. ನಮ್ಮ ಪಕ್ಷದ ಕಾರ್ಯಕರ್ತರಿಗೂ ಸಮಯ ನಿಗಧಿಗೆ ನಿರ್ಧರಿಸಿದ್ದೇನೆ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ಈ ಸಭೆಗಳು ಶಾಸಕರ ಮತ್ತು ಅವರ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಆಲಿಸುವ ಮತ್ತು ಪರಿಹರಿಸುವ ಗುರಿಯನ್ನು ಹೊಂದಿವೆ ಎಂದು ಅವರು ಹೇಳಿದರು.

ಡಿಕೆ ಶಿವಕುಮಾರ್ ಅವರು ಬೆಂಗಳೂರಿನಿಂದ ಹೊರಗಿರುವ ದಿನಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ದಿನಗಳಲ್ಲಿ ಈ ಸಭೆಗಳು ನಡೆಯುತ್ತವೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago