ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ.
ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.
ಬಿಜೆಪಿಯ ಕಿಶೋರ್ ಕುಮಾರ್ ಅವರು 3654 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದು, 1957 ಮತ ಗಳಿಸಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಇನ್ನು ಎಸ್‌ಡಿಪಿಐನ ಅನ್ವರ್ ಸಾದತ್ ಅವರು 195 ಮತಗಳನ್ನು ಪಡೆದಿದ್ದಾರೆ.
ಕಿಶೋರ್ ಕುಮಾರ್ ಅವರು ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಲೋಕಸಭೆ ಸದಸ್ಯರಾಗಿ ಆಯ್ಕೆಯಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆ ಸ್ಥಾನ ಭರ್ತಿಗಾಗಿ ಉಪಚುನಾವಣೆ ನಡೆದಿದ್ದು, ಅಕ್ಟೋಬರ್.21ರಂದು ಮತದಾನ ನಡೆದಿತ್ತು.