ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರು ತಮ್ಮ ಮದುವೆ ಆಮಂತ್ರಣದ ಕರೆಯೋಲೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ.
ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ಕೆಲವು ದಿನಗಳ ಹಿಂದೆಯಷ್ಟೇ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ನಿವಾಸದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಮೊದಲ ಮದುವೆ ಆಮಂತ್ರಣ ಕರೆಯೋಲೆಯನ್ನು ನೀಡಿ ಸಿದ್ದರಾಮಯ್ಯ ಅವರನ್ನು ಮದುವೆಗೆ ಆಹ್ವಾನಿಸಿದ್ದಾರೆ.
ಸ್ಯಾಂಡಲ್‌ವುಡ್ ನಟ ಧನಂಜಯ್ ಹಾಗೂ ವೈದ್ಯರಾದ ಧನ್ಯತಾ ಅವರು ಫೆಬ್ರವರಿ 15 ಮತ್ತು 16 ರಂದು ಮೈಸೂರಿನ ವಸ್ತು ಸಂಗ್ರಹಾಲಯ ಮೈದಾನದಲ್ಲಿ ಅದ್ಧೂರಿಯಾಗಿ ಮದುವೆ ಆಗಲಿದ್ದಾರೆ. ಹೀಗಾಗಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯ ಪೂಜೆ ನೆರವೇರಿಸಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಮದುವೆ ಆಮಂತ್ರಣವನ್ನು ನೀಡಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಹ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಹೊಸ ಬದುಕಿಗೆ ಕಾಲಿಡುತ್ತಿರುವ ಜೋಡಿಗೆ ಶುಭಾಶಯಗಳು ಎಂದು ಪೋಸ್ಟ್ ಮಾಡಿದ್ದಾರೆ.