ರಾಜ್ಯ

ಸಿಎಂ ಸಿದ್ದರಾಮಯ್ಯಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ಅವರು ತಮ್ಮ ಮದುವೆ ಆಮಂತ್ರಣದ ಕರೆಯೋಲೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ.

ಡಾಲಿ ಧನಂಜಯ್‌ ಮತ್ತು ಧನ್ಯತಾ ಅವರು ಕೆಲವು ದಿನಗಳ ಹಿಂದೆಯಷ್ಟೇ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ನಿವಾಸದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಮೊದಲ ಮದುವೆ ಆಮಂತ್ರಣ ಕರೆಯೋಲೆಯನ್ನು ನೀಡಿ ಸಿದ್ದರಾಮಯ್ಯ ಅವರನ್ನು ಮದುವೆಗೆ ಆಹ್ವಾನಿಸಿದ್ದಾರೆ.

ಸ್ಯಾಂಡಲ್‌ವುಡ್‌ ನಟ ಧನಂಜಯ್‌ ಹಾಗೂ ವೈದ್ಯರಾದ ಧನ್ಯತಾ ಅವರು ಫೆಬ್ರವರಿ 15 ಮತ್ತು 16 ರಂದು ಮೈಸೂರಿನ ವಸ್ತು ಸಂಗ್ರಹಾಲಯ ಮೈದಾನದಲ್ಲಿ ಅದ್ಧೂರಿಯಾಗಿ ಮದುವೆ ಆಗಲಿದ್ದಾರೆ. ಹೀಗಾಗಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯ ಪೂಜೆ ನೆರವೇರಿಸಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಮದುವೆ ಆಮಂತ್ರಣವನ್ನು ನೀಡಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಹ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿ, ಹೊಸ ಬದುಕಿಗೆ ಕಾಲಿಡುತ್ತಿರುವ ಜೋಡಿಗೆ ಶುಭಾಶಯಗಳು ಎಂದು ಪೋಸ್ಟ್‌ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

9 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

10 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

10 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

10 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

10 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

11 hours ago