ರಾಜ್ಯ

ಜನ ಬಯಸಿದಾಗ ದಲಿತ ಸಿಎಂ ಕೂಗು ಈಡೇರಲಿದೆ: ಸಚಿವ ಮಹದೇವಪ್ಪ

ಕಲಬುರಗಿ: ಪಕ್ಷ ನಿರ್ಣಯಿಸಿದಾಗ, ಜನ ಬಯಸಿದಾಗ ದಲಿತ ಮುಖ್ಯಮಂತ್ರಿ ಆಸೆ ಈಡೇರಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಹೆಚ್ಚಿದೆ. ಬಾಬಾ ಸಾಹೇಬ ಅಂಬೇಡ್ಕರ್‌ ಅವರು ದಲಿತರು ಅಧಿಕಾರದ ನಿರ್ಣಾಯಕ ಸ್ಥಾನದಲ್ಲಿರಬೇಕೆಂದು ಬಯಸಿದ್ದರು. ಪಕ್ಷ ಹಾಗೂ ಜನ ಬಯಸಿದರೆ ದಲಿತ ಸಿಎಂ ಕೂಗು ಈಡೇರಲಿದೆ ಎಂದು ಹೇಳಿದರು.

ಎಸ್‍ಇಪಿಟಿಎಸ್‍ಪಿ ಹಣವನ್ನು ಬಳಕೆ ಮಾಡುವ ಸಂಬಂಧ ದಲಿತ ಸಂಘಟನೆಗಳ ಮುಖಂಡರು ಇತ್ತೀಚೆಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ಸಲಹೆಗಳನ್ನು ನೀಡಿದ್ದಾರೆ. ನಮ್ಮ ಸರ್ಕಾರ ಅದನ್ನು ಪರಿಶೀಲನೆ ಮಾಡುತ್ತದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಎಸ್‍ಇಪಿಟಿಎಸ್‍ಪಿಯನ್ನು ಸಾಮಾನ್ಯ ವರ್ಗಕ್ಕೆ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಜಾತಿ/ಪಂಗಡದ ಜನರಿಗೆ ಮಾತ್ರ ಈ ಹಣ ಬಳಕೆ ಮಾಡಲಾಗುತ್ತಿದೆ. ಜನ ಇದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವಿವರಣೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

30 mins ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

35 mins ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

37 mins ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

39 mins ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

41 mins ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

12 hours ago