ರಾಜ್ಯ

ಕರಾಳ ಕರ್ನಾಟಕ | ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವು; 25ಕ್ಕೂ ಹೆಚ್ಚು ಮಂದಿ ಗಂಭೀರ

ಬೆಂಗಳೂರು : ಕರ್ನಾಟಕದ ಪಾಲಿಗೆ ಬುಧವಾರ ಕರಾಳ ದಿನವಾಗಿ ಪರಿಣಮಿಸಿದ್ದು, ಮುಂಜಾನೆ ಸಂತೆಗೆ ಹಾಗೂ ದೇವರ ಆರಾಧನೆಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ರಸ್ತೆ ಆಪಘಾತದಲ್ಲಿ 14 ಮಂಧಿ ಸ್ಥಳದಲ್ಲೇ ಸಾವನ್ನಪ್ಪಿ 25 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹಣ್ಣು, ತರಕಾರಿ ತುಂಬಿಕೊಂಡು ವ್ಯಾಪಾರಸ್ಥರೊಂದಿಗೆ ಸಂತೆಗೆ ತೆರಳುತ್ತಿದ್ದ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದು 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಘಟ್ಟದ ಕಾಗೇರಿ ಪೆಟ್ರೋಲ್ ಬಂಕ್ ಬಳಿ ಬುಧವಾರ ಮುಂಜಾನೆ ಸಂಭವಿಸಿದೆ. ಇನ್ನೊಂದು ಆಂಧ್ರ ಪ್ರದೇಶದ ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಹಾಗೂ ಚಾಲಕ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಹೊರವಲಯದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಉತ್ತರ ಕನ್ನಡ ವರದಿ
ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ನಡೆದಿದೆ. ಈ ಘಟನೆಯಲ್ಲಿ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಸವಣೂರು ಕಡೆಯವರಾಗಿದ್ದಾರೆ. ಸ್ಥಳದಲ್ಲೇ ಒಂಭತ್ತು ಮಂದಿ ಸಾವನ್ನಪ್ಪಿದರೆ ಮತ್ತೊಬ್ಬರು ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಅಪಘಾತ ನಡೆದಿದೆ. 25ಕ್ಕೂ ಅಧಿಕ ಜನರು ತರಕಾರಿ ತುಂಬಿದ್ದ ಲಾರಿಯಲ್ಲಿ ಕುಳಿತಿದ್ದರು. ಲಾರಿ ಸವಣೂರಿನಿಂದ ಕುಮಟಾಗೆ ಹೊರಟಿತ್ತು. ಮುಂಜಾನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಂಜು ಆವರಿಸಿತ್ತು. ರಸ್ತೆ ಸರಿಯಾಗಿ ಕಾಣದ ಹಿನ್ನಲೆಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ಪಲ್ಟಿಯಾಗಿದೆ. ಮೃತಪಟ್ಟವರೆಲ್ಲರೂ ಸವಣೂರು ಮೂಲದವರು ಎಂದು ತಿಳಿದುಬಂದಿದೆ.

ಹಾವೇರಿ ಜಿಲ್ಲೆಯ ಸವಣೂರಿನಿಂದ ಕುಮಟಾದ ಸಂತೆಗೆ ತೆರಳುತ್ತಿದ್ದ ಲಾರಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವ್ಯಾಪಾರಸ್ಥರು ತರಕಾರಿಗಳನ್ನು ತುಂಬಿಕೊಂಡು ತೆರಳುತ್ತಿದ್ದರು. ಯಲ್ಲಾಪುರದ ಅರಬೈಲ್ ಘಟ್ಟದ ಬಳಿ ಲಾರಿ ಕಂದಕಕ್ಕೆ ಉರುಳಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೂ ಮೃತಪಟ್ಟಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಹಾವೇರಿ ಜಿಲ್ಲೆ ಸವಣೂರಿನ ಅಸ್ಲಂ ಬಾಬುಲಿ ಬೆಣ್ಣಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳೀಯರು, ಪೊಲೀಸರು ಸ್ಥಳಕ್ಕೆ ಧಾವಿಸಿ ತರಕಾರಿ ರಾಶಿಯ ಅಡಿ ಸಿಲುಕಿರುವ ಶವಗಳನ್ನು ಹೊರ ತೆಗೆದರು.

ದಟ್ಟ ಮಂಜು ಇದ್ದ ಕಾರಣ ಅಪಘಾತ ಸಂಭವಿಸಿದೆ. ಮಂಜು ಮುಸುಕಿದ್ದರಿಂದ ಎದುರಿಗೆ ಬರುತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಲಾರಿ ಪಲ್ಟಿಯಾಗಿದೆ. ವಾಹನದಲ್ಲಿ ಹಣ್ಣು, ತರಕಾರಿಗಳಿತ್ತು, 28 ಜನ ಪ್ರಯಾಣಿಸುತಿದ್ದರು. ಲಾರಿ ಪಲ್ಟಿಯಾದ ಕಾರಣ ಜನರ ಮೇಲೆ ತರಕಾರಿ ಬಿದ್ದು ಉಸಿರುಗಟ್ಟಿ 9 ಜನ ಸಾವನ್ನಪ್ಪಿದ್ದಾರೆ.

ಲಾರಿ ಅಪಘಾತವಾಗಿ 1 ಗಂಟೆ ನಂತರ ಮಾಹಿತಿ ದೊರೆತಿದೆ. ಅಲ್ಲಿಯವರೆಗೂ ಲಾರಿಯಲ್ಲಿ ಜನರಿರುವ ಬಗ್ಗೆ ಮಾಹಿತಿಯೇ ಇರಲಿಲ್ಲ. ಕ್ರೇನ್ ತಂದು ಲಾರಿ ಮೇಲೆತ್ತಿದಾಗ ಜನರಿರುವುದು ಗೊತ್ತಾಯ್ತು. ಆಗಲೇ 9 ಜನ ಸ್ಥಳದಲ್ಲೇ ಸಾವು ಕಂಡಿದ್ದರು. ತಕ್ಷಣ ಉಳಿದವರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಗಂಭೀರ ಗಾಯವಾದವರನ್ನ ಹುಬ್ಬಳ್ಳಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಒಟ್ಟು 10 ಜನ ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆಂದು ಎಸ್ಪಿ ತಿಳಿಸಿದ್ದಾರೆ.

ಯಲ್ಲಾಪುರ ಆಸ್ಪತ್ರೆಗೆ ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಮೃತ ದೇಹಗಳನ್ನು ಆದಷ್ಟು ಶೀಘ್ರವಾಗಿ ಮೃತರ ಊರಿಗೆ ಸಾಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಾಯಗೊಂಡವರನ್ನು ಹುಬ್ಬಳ್ಳಿ, ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಶವಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಗಾಯಗೊಂಡವರು ಹಾಗೂ ಮೃತರಾದವರು ಹಾವೇರಿಯ ಸವಣೂರು ಮೂಲದವರಾಗಿದ್ದು, ಕುಮಟಾದಲ್ಲಿ ನಡೆಯುವ ಸಂತೆಗೆ ಹಣ್ಣು ತರಕಾರಿ ಒಯ್ಯುತ್ತಿದ್ದರು. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು ವರದಿ
ರಾಯಚೂರಿನಲ್ಲಿ 4 ಸಾವು: ಕ್ರೂಸರ್ ಆಕ್ಸೆಲ್ ಕಟ್ ಆಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಸಿಂಧನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಮೃತಪಟ್ಟವರೆಲ್ಲಾ ವಿದ್ಯಾರ್ಥಿಗಳು. ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳಾದ ಹಯವದನ (18), ಸುಜಯೇಂದ್ರ (22),ಅಭಿಲಾಷ (20) ಹಾಗೂ ಚಾಲಕ ಕಂಸಾಲಿ ಶಿವ (20) ಮೃತರು.

14 ಜನ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನದ ಆಕ್ಸಲ್ ಕಟ್ ಆಗಿ ಮೂರು ಪಲ್ಟಿ ಹೊಡೆದಿದೆ. ಚಾಲಕನ ಅತಿಯಾದ ವೇಗ ಅಪಘಾತಕ್ಕೆ ಕಾರಣವೆಂದು ವರದಿಯಾಗಿದೆ. ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುವಾಗ ಅಪಘಾತ ನಡೆದಿದ್ದು, ನಾಲ್ವರು ಮೃತಪಟ್ಟಿದ್ದರೆ, ಉಳಿದವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಆಕ್ಸಿಲರೇಟರ್ ಕಟ್ ಆಗಿದ್ದರಿಂದ ವಾಹನ ಪಲ್ಟಿ ಹೊಡೆದಿದೆ. ಘಟನೆಗೆ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.

ಸದ್ಯ ಗಾಯಗೊಂಡ 10 ವಿದ್ಯಾರ್ಥಿಗಳನ್ನ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಶ್ರೀಗಳು ಆಗಮಿಸಿ ಮಾಹಿತಿ ಪಡೆದಿದ್ದಾರೆ. ಈ ದುರ್ಘಟನೆಯ ಸ್ಥಳಕ್ಕಾಗಮಿಸಿದ ಮಂತ್ರಾಲಯದ ಶ್ರೀಗಳು ಮಾಹಿತಿ ಪಡೆದರು.
ಕಾರವಾರದಲ್ಲಿ ಮೃತಪಟ್ಟವರು:
1. ಫಯಾಜ್ (45)
2. ವಾಸಿಮ್ (25)
3. ಇಜಜ್ (20)
4. ಸಾದೀಕ್ (30)
5. ಗುಲಾಮ್ ಹುಸೇನ್
6. ಇಮ್ತಿಯಾಜ್ (40)
7. ಅಲ್ಪಾಜ್ – (25)
8. ಜಿಲಾನಿ (20)
9. ಅಸ್ಲಾಂ (24)
10. ಜಲಾಲ್ (30) -ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು

ರಾಯಚೂರಿನಲ್ಲಿ ಮೃತಪಟ್ಟವರು
ಹಯವದನ (18
ಸುಜಯೇಂದ್ರ(22),
ಅಭಿಲಾಷ (20)
ಚಾಲಕ ಜಂಸಾಲಿ ಶಿವ (20)
ರಾಯಚೂರು ವರದಿ

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಂರ ಮೀಸಲಾತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…

1 hour ago

ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ

ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…

1 hour ago

ಒಂದು ತಿಂಗಳು ʼಜಲ ಸಂರಕ್ಷಣಾ ಅಭಿಯಾನʼ: ಡಿಕೆ ಶಿವಕುಮಾರ್‌

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…

2 hours ago

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…

3 hours ago

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…

3 hours ago

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…

4 hours ago