ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರರನ್ನು 64ನೇ ಸೆಷನ್ಸ್ ನ್ಯಾಯಾಲಯ ವಿಚಾರಣೆ ನಡೆಸಿದೆ.
ಆದರೆ ಇಂದು ಆರೋಪಿಗಳಾದ ವಿನಯ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್.9ಕ್ಕೆ ಮುಂದೂಡಿಕೆ ಮಾಡಿದೆ. ಆ ದಿನ ಎಲ್ಲಾ ಆರೋಪಿಗಳು ಹಾಜರಾಗಲೇಬೇಕು ಎಂದು ನ್ಯಾಯಾಲಯ ಖಡಕ್ ಸೂಚನೆ ನೀಡಿದೆ.
ಎಲ್ಲಾ ಆರೋಪಿಗಳು ಹಾಜರಾಗಿದ್ದರೆ ಇಂದೇ ಚಾರ್ಜಸ್ ಫ್ರೇಮ್ ಮಾಡುವ ಸಾಧ್ಯತೆಯಿತ್ತು. ಆದರೆ ಕೆಲ ಆರೋಪಿಗಳು ಗೈರಾದ ಕಾರಣ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ಜಾಮೀನು ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದೆ.





