ರಾಜ್ಯ

ಕೊಲೆ ಕೇಸ್‌ನಲ್ಲಿ ಕೋರ್ಟ್‌ಗೆ ಹಾಜರಾದ ದರ್ಶನ್‌: ವಿಚಾರಣೆ ಸೆಪ್ಟೆಂಬರ್.‌9ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್‌, ಪವಿತ್ರಾ ಗೌಡ ಹಾಗೂ ಇತರರನ್ನು 64ನೇ ಸೆಷನ್ಸ್‌ ನ್ಯಾಯಾಲಯ ವಿಚಾರಣೆ ನಡೆಸಿದೆ.

ಆದರೆ ಇಂದು ಆರೋಪಿಗಳಾದ ವಿನಯ್‌, ಕಾರ್ತಿಕ್‌, ಕೇಶವಮೂರ್ತಿ, ನಿಖಿಲ್‌ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್.‌9ಕ್ಕೆ ಮುಂದೂಡಿಕೆ ಮಾಡಿದೆ. ಆ ದಿನ ಎಲ್ಲಾ ಆರೋಪಿಗಳು ಹಾಜರಾಗಲೇಬೇಕು ಎಂದು ನ್ಯಾಯಾಲಯ ಖಡಕ್‌ ಸೂಚನೆ ನೀಡಿದೆ.

ಎಲ್ಲಾ ಆರೋಪಿಗಳು ಹಾಜರಾಗಿದ್ದರೆ ಇಂದೇ ಚಾರ್ಜಸ್‌ ಫ್ರೇಮ್‌ ಮಾಡುವ ಸಾಧ್ಯತೆಯಿತ್ತು. ಆದರೆ ಕೆಲ ಆರೋಪಿಗಳು ಗೈರಾದ ಕಾರಣ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್‌ ಜಾಮೀನು ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದೆ.

ಆಂದೋಲನ ಡೆಸ್ಕ್

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

5 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

6 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

6 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

6 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

10 hours ago