ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪ್ರಕರಣ ಸಂಬಂಧ ಇಂದು ಸೆಷನ್ ಕೋರ್ಟ್‌ನಲ್ಲಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ನಟ ದರ್ಶನ್, ನಟಿ ಪವಿತ್ರಗೌಡ, ವಿನಯ್ ಸೇರಿ ಐದು ಜನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸುನೀಲ್, ಪವಿತ್ರಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಲಿದ್ದಾರೆ.
ಸರ್ಕಾರಿ ಅಭಿಯೋಜಕರು ಶುಕ್ರವಾರವೇ ದರ್ಶನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದ್ದರು. ಹೀಗಾಗಿ, ದರ್ಶನ್ ಸೇರಿದಂತೆ ಇತರರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇಂದಿನ ವಿಚಾರಣೆಯಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎಂಬುದು ಕಾದು ನೋಡಬೇಕಿದೆ.