ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ನಟ ದರ್ಶನ್ ಪ್ರಕರಣಕ್ಕೆ ತಿರುವು ಪಡೆಯುವ ಹಂತದಲ್ಲಿಯೇ ದಿಢೀರ್ ಬದಲಾವಣೆ ನಡೆದಿದೆ.
ಈ ರೇಣುಕಾಸ್ವಾಮಿ ಪ್ರಕರಣದ ಮುಖ್ಯ ತನಿಖಾಧಿಕಾರಿಯನ್ನು ಬದಲಾವಣೆ ಮಾಡಿ ನೂತನ ತನಿಖಾಧಿಕಾರಿಯನ್ನು ನೇಮಕ ಮಾಡಿದ್ದಾರೆ. ಕಾಮಾಕ್ಷಿಪಾಳ್ಯದ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಅವರು ದರ್ಶನ್ ಪ್ರರಕಣದ ತನಿಖೆ ಮಾಡುತ್ತಿದ್ದರು. ಇವರನ್ನು ಇಂದು ದಿಢೀರ್ ಬದಲಾಣೆ ಮಾಡಿದ್ದು, ಅವರ ಜಾಗಕ್ಕೆ ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇಂದಿನಿಂದ ಈ ತನಿಖೆ ಚಂದನ್ ಅವರಿಂದ ಮುಂದುವರೆಯಲಿದೆ.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸಿ.ಕೆ ಅಚ್ಚುಕಟ್ಟು ಠಾಣೆಯಿಂದ ಗಿರೀಶ್ ನಾಯ್ಕ್ ಅವರನ್ನು ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾಯಿಸಲಾಗಿತ್ತು. ಈ ಎರಡು ದಿನಗಳ ಹಿಂದೆ ತಮ್ಮ ಈ ಹಿಂದಿನ ಠಾಣೆಗೆ ವಾಪಸ್ ಮರಳಲು ಆದೇಶ ಬಂದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಪ್ರಕರಣದಿಂದ ಗಿರೀಶ್ ಹೊರ ನಡೆದಿದ್ದಾರೆ. ಹೀಗಾಗಿ ಈ ಪ್ರಕರಣದ ಜಾವಾಬ್ದಾರಿ ಸಂಪೂರ್ಣವಾಗಿ ಎಸಿಪಿ ಚಂದನ್ ಅವರ ಹೆಗಲ ಮೇಲೆ ಬಿದ್ದಿದೆ.
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…