ರಾಜ್ಯ

ದರ್ಶನ್‌ ನೋಡಲು ಜೈಲಿನ ಬಳಿ ಬರುತ್ತಲೇ ಇರುವ ಫ್ಯಾನ್ಸ್

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಹಲವರ ಬಂಧನವಾಗಿದ್ದು, ಎಲ್ಲರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ದರ್ಶನ್​ ಸೇರಿ ಹಲವು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ. ನಾಲ್ಕು ಆರೋಪಿಗಳನ್ನು ತುಮಕೂರಿನ ಜೈಲಿಗೆ ಸ್ಥಳಾಂತರಿಸಲಾಗಿದೆ.

ಇನ್ನು ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ದರ್ಶನ್ ಅನ್ನು ನೋಡಲು ಜೈಲಿನ ಬಳಿ ಅಭಿಮಾನಿಗಳು ಬರುತ್ತಲೇ ಇದ್ದಾರೆ.ಜೈಲಿನೊಳಗೆ ಬಿಡುವುದಿಲ್ಲ ಎಂದು ಗೊತ್ತಿದ್ದರು ಕೂಡ ದರ್ಶನ್ ಅನ್ನು ನೋಡಲು ಬೇರೆ ಜಿಲ್ಲೆಗಳಿಂದ ಮಹಿಳಾ ಅಭಿಮಾನಿಗಳು ಸೇರಿದಂತೆ ಇತರ ಅಭಿಮಾನಿಗಳು ಕೂಡ ಆಗಮಿಸುತ್ತಿದ್ದಾರೆ.

ಇದೇ ವೇಳೆ ಮಾಧ್ಯಮದವರೊಂದಿಗೆ ಮಹಿಳಾ ಅಭಿಮಾನಿಯೊಬ್ಬರು ಮಾತನಾಡಿದ್ದು, ದರ್ಶನ್‌ ಅಂದ್ರೆ ನಮಗೆ ಬಹಳ ಇಷ್ಟ,ಅವರ ಎಲ್ಲಾ ಸಿನಿಮಾಗಳು ನೋಡಿದ್ದೇನೆ ಅವರು ಹೆಣ್ಣು ಮಕ್ಕಳಿಗೆ ಕೊಡುವ ಗೌರವ ನಮಗೆ ತುಂಬಾ ಇಷ್ಟ. ನಮ್ಮ ಬಾಸ್‌ ಈ ರೀತಿ ಮಾಡಿರಲ್ಲ,ಅವರು ಕೊಲೆ ಮಾಡಿರೋದನ್ನ ನೀವು ನೋಡಿಲ್ಲ ನಾವು ನೀಡಿಲ್ಲ ಹೀಗಿರುವಾಗ ಅದೇಗೆ ಅವರನ್ನ ಕೊಲೆ ಮಾಡಿದ್ದಾರೆ ಎನ್ನುತ್ತೀರಾ ಎಂದು ಹೇಳಿದರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago