ಚಿತ್ರದುರ್ಗಾ: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲುಪಾಲಾಗಿರುವ ನಟ ದರ್ಶನ್ ಅವರು ಜೈಲಿನೊಳಗೆ ಖೈದಿಗಳೊಂದಿಗೆ ಟೀ ಕುಡಿಯುತ್ತಾ ಮಾತುಕತೆಯಲ್ಲಿ ತೊಡಗಿರುವ ವೀಡಿಯೋ ಸದ್ಯ ಸಖತ್ ವೈರಲ್ ಆಗುತ್ತಿದೆ.
ಈ ವಿಡಿಯೋ ತುಣುಕನ್ನು ನೋಡಿದ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಕಣ್ಣೀರು ಹಾಕಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ದರ್ಶನ್ ಅವರಿಗೆ ತಾವು ತಪ್ಪು ಮಾಡಿರುವ ಭಾವನೆ ಮೂಡಿರುವಂತೆ ಕಾಣುತ್ತಿಲ್ಲ. ರೆಸಾರ್ಟ್‌ನಲ್ಲಿ ಕುಳಿತಿರುವ ಹಾಗೆ ದರ್ಶನ್ ಕುಳಿತಿರುವುದನ್ನು ನೋಡಿ ನನಗೆ ಗಾಬರಿಯಾಗಿದೆ ಎಂದು ಭಾವುಕರಾದರು.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ನ್ಯಾಯಾಂಗದ ಬಗ್ಗೆ ನಮಗೆ ಇನ್ನು ನಂಬಿಕೆಯಿದೆ. ನಟ ದರ್ಶನ್‌ಗೆ ಈ ವ್ಯವಸ್ಥೆ ಮಾಡಿದವರಿಗೂ ಶಿಕ್ಷೆ ಕೊಡಿಸಬೇಕು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಡಾ. ಜಿ.ಪರಮೇಶ್ವರ್ ಅವರು ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಮಗನನ್ನು ಕಳೆದುಕೊಂಡು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದೇವೆ. ಆದರೆ ಆರೋಪಿಗಳು ಜೈಲಿನಲ್ಲಿ ಚೈನಿ ಹೊಡೆಯುತ್ತಿದ್ದಾರೆ. ಇದನ್ನು ನೋಡಿದರೇ ಸೂಕ್ತ ತನಿಖೆಗಾಗಿ ಸಿಬಿಐ ತನಿಖೆಗೆ ವಹಿಸಬೇಕು ಎಂದೆನಿಸುತ್ತಿದೆ. ಇಲ್ಲಿಯವರೆಗೆ ನಡೆದ ರೀತಿಯಲ್ಲಿಯೇ ತನಿಖೆ ಮುಂದುವರಿಯಲಿ ಎಂದು ಅವರು ಮನವಿ ಮಾಡಿದರು.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…