ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಕೃತ್ಯವನ್ನು ಮದ್ದೂರು ಶಾಸಕ ಕೆ.ಎಂ ಉದಯ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಇಂದು(ಜೂ.21) ಬೆಂಗಳೂರಿನಲ್ಲಿ ಮಾತನಾಡಿದ ಉದಯ್, ದರ್ಶನ್ ಸ್ವಲ್ಪ ಮುಂಗೋಪಿ, ಸಿಟ್ಟು ಜಾಸ್ತಿ. ಆದರೆ ಕೊಲೆ ಮಾಡುವಷ್ಟು ಕ್ರೂರಿಯಲ್ಲ ಎಂದಿದ್ದಾರೆ.
ದರ್ಶನ್ ನನಗೆ ಹಲವು ವರ್ಷಗಳಿಂದ ಸ್ನೇಹಿತ. ಈ ರೀತಿ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ಅವರ ಜೊತೆಗಿರುವವರು ಮಾಡಿ, ಇವರ ಮೇಲೆ ಏನಾದ್ರು ಹಾಕಿದ್ರ ಗೊತ್ತಿಲ್ಲ. ಶಿಘ್ರದಲ್ಲೇ ಎಲ್ಲವೂ ತಿಳಿಯಲಿದೆ. ತನಿಖೆಯಲ್ಲಿ ಎಲ್ಲ ಸತ್ಯಸತ್ಯತೆ ಹೊರಬರಲಿದೆ. ನಾನು ಈಗಲೇ ಏನನ್ನೂ ಹೇಳಲು ಬರುವುದಿಲ್ಲ ಎಂದು ಹೇಳಿದ್ದಾರೆ.
ದರ್ಶನ್ ಅಭಿಮಾನಿಗಳು ಹಾಗೂ ಮಾಧ್ಯಮದವರ ಬಳಿ ಸ್ವಲ್ಪ ಮುಂಗೋಪದಿಂದ ಮಾತನಾಡುತ್ತಾನೆ ಅಷ್ಟೇ. ಇನ್ನೇನು ಕೆಲವೇ ದಿನಗಳಲ್ಲಿ ಏನು ಎತ್ತ ಹೊರಬಂದು, ರಾಜ್ಯದ ಜನರಿಗೆ ತಿಳಿಯಲಿದೆ ಎಂದಿದ್ದಾರೆ.
ಇನ್ನೂ ತಮ್ಮ ಗನ್‌ಮ್ಯಾನ್ ಮೇಲೆ ದರ್ಶನ್ ಬೆಂಬಲಿಗರಿಂದ ಹಲ್ಲೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಗನ್‌ಮ್ಯಾನ್ ಮೇಲೆ ಹಲ್ಲೆ ಅನ್ನೋದು ಗೊತ್ತಿಲ್ಲ. ಅದೆಲ್ಲವೂ ಸುಳ್ಳು, ಆ ರೀತಿಯ ಘಟನೆ ನಡೆದಿಲ್ಲ. ನಿಮಗೆ ಇದೆಲ್ಲಾ ಯಾರು ಹೇಳಿದ್ದು. ಆ ಘಟನೆ ನಡೆದೆ ಇಲ್ಲ ಎಂದರು.
ನನಗೆ ಐದಾರು ಜನ ಗನ್‌ಮ್ಯಾನ್ ಇದ್ದಾರೆ. ಹಲ್ಲೆ ನಡೆದಿದ್ದರೆ ನನಗೆ ತಿಳಿಯುತ್ತಿಲ್ಲವಾ? ಅಂತಾದ್ದೂ ಯಾವುದು ನಡೆದಿಲ್ಲ. ಇದೆಲ್ಲಾ ಸುಳ್ಳು ಸೃಷ್ಟಿಯಷ್ಟೇ ಎಂದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…