ರಾಜ್ಯ

ದರ್ಶನ್‌ಗೆ ಸಿಗದ ಅಗತ್ಯ ಸೌಲಭ್ಯ : ಜೈಲು ಪರಿಶೀಲಿಸಿದ ವರದಿ ನೀಡಲು ಕಾನೂನು ಸೇವಾ ಪ್ರಾಧಿಕಾರಕ್ಕೆ ಕೋರ್ಟ್‌ ಸೂಚನೆ

ಬೆಂಗಳೂರು : ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಅಂತ ಪರಿಶೀಲನೆ‌ ನಡೆಸಿ ವರದಿ ನೀಡಲು ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಹೈ ಕೋರ್ಟ್ ಆದೇಶ ನೀಡಿದೆ.

ನಟ ದರ್ಶನ್ ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದ ಬಳಿಕ ಜೈಲು ನರಕವಾಗಿದೆ. ಜೈಲ್ ಮ್ಯಾನ್ಯುವಲ್ ಪ್ರಕಾರ ದರ್ಶನ್‌ಗೆ ಕನಿಷ್ಟ ಸೌಲಭ್ಯಗಳನ್ನ ನೀಡಬೇಕೆಂದು ಕೋರ್ಟ್ ಆದೇಶವಿದ್ದರೂ ನೀಡಿಲ್ಲ ಅಂತಾ ದರ್ಶನ್ ಪರ ವಕೀಲ ಸುನೀಲ್ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದರು. ಅದಾದ ಬಳಿಕ ಸಿಆರ್‌ಪಿಸಿ 310 ರಡಿ ಅರ್ಜಿ ಸಲ್ಲಿಸಿ ದರ್ಶನ್‌ಗೆ ಕೊಟ್ಟಿರುವ ಸೌಲಭ್ಯಗಳೇನು ಅಂತ ಜಡ್ಜ್ ಜೈಲಿಗೆ ಬಂದು ಪರಿಶೀಲಿಸಬೇಕೆಂದು ಮನವಿ ಮಾಡಿದ್ದರು. ಇಂದು ಈ ಎರಡೂ ಅರ್ಜಿಗಳ ಸಂಬಂಧ ಸಿಸಿಎಚ್ 64 ರ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ : ಜೈಲಿನಲ್ಲಿ ದರ್ಶನ್‌ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಲಿಗೆ ಭೇಟಿ ನೀಡಿ, ದರ್ಶನ್‌ಗೆ ನೀಡಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ವರದಿ ನೀಡಬೇಕು. ಕೋರ್ಟ್ ಆದೇಶ ಪಾಲನೆ ಆಗಿದ್ಯಾ ಇಲ್ವಾ ಅಂತ ಪರಿಶೀಲನೆ ನಡೆಸಬೇಕು. ಜೈಲಿನ ಮ್ಯಾನ್ಯುವಲ್ ಅಡಿ ದರ್ಶನ್‌ಗೆ ಅಗತ್ಯ ವಸ್ತುಗಳನ್ನ ನೀಡಲಾಗಿದೆಯಾ? ಜೈಲಿನಲ್ಲಿ ದರ್ಶನ್‌ಗೆ ಮಾನಸಿಕ ಮತ್ತು ದೈಹಿಕ ಹಿಂಸೆಯಾಗ್ತಿದ್ಯಾ ಪರಿಶೀಲಿಸಿ ಅ.18ರ ಒಳಗೆ ವರದಿ ನೀಡುವಂತೆ ನ್ಯಾಯಾಧೀಶರು, ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಆದೇಶ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

13 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

15 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago