ರಾಜ್ಯ

ರೇಣುಕಾಸ್ವಾಮಿ ಹತ್ಯೆ ಕೇಸ್‌: ಜಪ್ತಿ ಮಾಡಿದ್ದ ಹಣ ಹಿಂತಿರುಗಿಸುವಂತೆ ಸೆಷನ್ಸ್ ಕೋರ್ಟ್‌ಗೆ ದರ್ಶನ್‌ ಅರ್ಜಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ದರ್ಶನ್‌ ನಿವಾಸದಲ್ಲಿ 40 ಲಕ್ಷ ರೂ.ಗಳನ್ನು ಜಪ್ತಿ ಮಾಡಿದ್ದರು. ಆದರೆ ಇದೀಗ ಆ ಹಣವನ್ನು ಹಿಂತಿರುಗಿಸುವಂತೆ ಕೋರಿ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಜನವರಿ.11) ರಂದು ಸೆಷನ್ಸ್‌ ಕೋರ್ಟ್‌ಗೆ ಆರೋಪಿ ದರ್ಶನ್‌ ಹಣವನ್ನು ವಾಪಾಸ್‌ ನೀಡುವಂತೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯಲ್ಲಿ ಅವರು ಜಪ್ತಿ ಮಾಡಿದ್ದ 40 ಲಕ್ಷ ರೂ. ಹಣಕ್ಕೂ, ರೇಣುಕಾಸ್ವಾಮಿ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಆ ಹಣ ನನ್ನ ಸ್ವಂತ ದುಡಿಮೆಯ ಹಣವಾಗಿದೆ. ಹೀಗಾಗಿ ಆ ಹಣವನ್ನು ಮನೆಯಲ್ಲಿಯೇ ಇರಿಸಿದ್ದೆ ಎಂದು ನಮೂದಿಸಿದ್ದಾರೆ.

ಇನ್ನೂ ನನ್ನ ಬಳಿ ಈಗ ನಿತ್ಯ ಖರ್ಚಿಗೆ ಹಾಗೂ ಆರೋಗ್ಯ ತುರ್ತಿಗಾಗಿ ಹಣದ ಅವಶ್ಯಕತೆ ಇದೆ. ಈ ಕಾರಣಕ್ಕೆ ಪೊಲೀಸರು ಜಪ್ತಿ ಮಾಡಿದ್ದ ಹಣವನ್ನು ವಾಪಾಸ್‌ ನೀಡುವಂತೆ ಮಾಡಬೇಕೆಂಬ ಮನವಿಯನ್ನು ಕೋರಿ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

40 ಲಕ್ಷ ರೂ. ಹಣದ ತನಿಖೆಗಾಗಿ ಐಟಿ ಪ್ರತ್ಯೇಕ ಅರ್ಜಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗೆ ಇರುವ ದರ್ಶನ್‌ ಜಪ್ತಿ ಮಾಡಿದ್ದ ಹಣವನ್ನು ವಾಪಾಸ್‌ ನೀಡುವಂತೆ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಐಟಿ ತನಿಖಾ ತಂಡವೂ ಸಹ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ.

ಅರ್ಜಿಯಲ್ಲಿ ಏನಿದೆ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಮನೆಯಲ್ಲಿ ಜಪ್ತಿ ಮಾಡಿದ್ದ 40 ಲಕ್ಷ ರೂ. ಬಗ್ಗೆ ತನಿಖೆ ನಡೆಸುವ ಅವಶ್ಯಕತೆ ಇದೆ. ಏಕೆಂದರೆ ಈ ಹಣದ ಮೂಲ ಮತ್ತು ಅಗತ್ಯತೆಯ ಬಗ್ಗೆ ತನಿಖೆ ನಡೆಸಬೇಕು. ಹೀಗಾಗಿ ತನಿಖೆ ಅವಕಾಶ ನೀಡಬೇಕು ಎಂದು ಕೋರಿ ಐಟಿ ತನಿಖಾ ಸಂಸ್ಥೆಯೂ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

8 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

8 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

8 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

8 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

8 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

8 hours ago