ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ದೀಪಾವಳಿಯ ಉಡುಗೊರೆ ಸಿಕ್ಕಿದೆ. ದರ್ಶನ್ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ಆರು ವಾರಗಳ ಅವಧಿಯ ಮಧ್ಯಂತರ ಜಾಮೀನನ್ನು ಹೈಕೋರ್ಟ್ ಮಂಜೂರು ಮಾಡಿದೆ. ಹೀಗಾಗಿ, 140ದಿನಗಳ ಬಳಿಕ ದರ್ಶನ್ ಬಿಡುಗಡೆಯಾಗುತ್ತಿದ್ದಾರೆ.
ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್‌ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಹೈಕೋರ್ಟ್‌ಗೆ ಅರ್ಜಿ ಹಾಕಿ, ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು.
ದರ್ಶನ್‌ಗೆ ತೀವ್ರ ಬೆನ್ನು ಹುರಿಯಿದ್ದ, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಲು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ವಾದ ಪತ್ರಿವಾದ ಆಲಿಸಿದ ನ್ಯಾಯಮೂರ್ತಿ ವಿಶ್ವೇಶ್ವರ ಭಟ್ ಅವರು, ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು ಎಂದು ಉಲ್ಲೇಖಿಸಿ ಷರತ್ತುಬದ್ಧ ಮಧ್ಯಂತ್ರ ಜಾಮೀನು ನೀಡಿದೆ. ಆದರೆ, 6 ವಾರಗಳ ಮಧ್ಯಂತರ ಜಾಮೀನು ಇದಾಗಿದೆ. ಎಸ್‌ಪಿಪಿ ಮನವಿ ಮನವಿ ಮೇರೆಗೆ ದರ್ಶನ್ ಪಾಸ್‌ಪೋರ್ಟ್ ವಶಕ್ಕೆ ನೀಡುವಂತೆ ಸೂಚಿಸಿದೆ.
ನ್ಯಾಯಾಲಯದ ಷರತ್ತು ಪೂರ್ಣಗೊಳಿಸಿದ ಬಳಿಕ ದರ್ಶನ್ ಇಂದು ಸಂಜೆಯೊಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಒಟ್ಟಾರೆಯಾಗಿ ಮದ್ಯಂತರ ಜಾಮೀನಿಂದ ದರ್ಶನ್ ಹಾಗೂ ದಾಸನ ಅಭಿಮಾನಿಗಳಿಗೆ ಇಂದಿನಿಂದಲೇ ದೀಪಾವಳಿ ಆರಂಭವಾಗಿದೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…