ರಾಜ್ಯ

ದರ್ಶನ್‌ ಬಿಡುಗಡೆ: ಬಂಧನದಿಂದ ಇಲ್ಲಿನವರೆಗೆ ಏನೆಲ್ಲಾ ಆಯ್ತು? ಇಲ್ಲಿದೆ ಮಾಹಿತಿ..

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ ಐದು ತಿಂಗಳ ನಂತರ ಬಿಡುಗಡೆಯಾಗಲಿದ್ದಾರೆ. ಕರ್ನಾಟಕ ಹೈಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ ಬಂಧನದಿಂದ ಇಲ್ಲಿಯವರೆಗೂ ಏನೆಲ್ಲಾ ಆಯ್ತು ಎಂಬುದರ ಮಾಹಿತಿ ಇಲ್ಲಿದೆ.

ನಟ ದರ್ಶನ್‌ ಡೇವಿಲ್‌ ಸಿನಿಮಾದ ಶೂಟಿಂಗ್‌ಗಾಗಿ ಮೈಸೂರಿನಲ್ಲಿ ತಂಗಿದ್ದ ವೇಳೆ ಜೂನ್‌ 11 ರಂದು ಬೆಂಗಳೂರು ಪೊಲೀಸರು ಬಂಧಿಸಿದ್ದರು.  11 ದಿನಗಳ ಕಾಲ ಪೊಲೀಸರ ಕಸ್ಟಡಿಯಲ್ಲಿ ವಿಚಾರಣೆಯನ್ನು ಎದುರಿಸಿದ್ದರು.

ವಿಚಾರಣೆ ಬಳಿಕ ದರ್ಶನ್ ನ್ಯಾಯಂಗ ಬಂಧನದ ಮೂಲಕ ಪರಪ್ಪನ ಅಗ್ರಹಾರದ ಜೈಲು ಸೇರಿದರು. ಬಳಿಕ‌ ದರ್ಶನ್‌ ತಮ್ಮ ವಕೀಲರ ಮೂಕ ಕೋರ್ಟ್‌ ವಿಚಾರಣೆ ಬಂದಾಗಲೆಲ್ಲಾ ವಾಪ-ಪ್ರತಿವಾದಗಳು ಬಲವಾಗಿ ಕೂಡಿದ್ದವು. ಹೀಗಾಗಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಪದೇ ಪದೇ ಮುಂದೂಡಲಾಗುತ್ತಿತ್ತು.

ಈ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ರಾಜ್ಯಾತಿಥ್ಯದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದವು. 69 ದಿನಗಳ ಕಾಲ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಕಳೆದಿದ್ದ ದರ್ಶನ್‌ನನ್ನು, ಆಗಸ್ಟ್‌ 29ರಂದು ಕೋರ್ಟ್‌ ಆದೇಶದ ಮೇರೆಗೆ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿಸಲಾಯಿತು. ಹೀಗೆ 140 ದಿನಗಳ ಕಾಲ ಜೈಲುವಾಸ ಅನುಭವಿಸುತ್ತಿದ್ದರು.

ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್‌ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್‌ ಪರ ವಕೀಲ ಸಿ.ವಿ ನಾಗೇಶ್‌ ಹೈಕೋರ್ಟ್‌ಗೆ ಅರ್ಜಿ ಹಾಕಿ, ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು.

ದರ್ಶನ್‌ಗೆ ತೀವ್ರ ಬೆನ್ನು ಹುರಿಯಿದ್ದ, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್‌ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಲು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ವಾದ ಪತ್ರಿವಾದ ಆಲಿಸಿದ ನ್ಯಾಯಮೂರ್ತಿ ವಿಶ್ವೇಶ್ವರ ಭಟ್‌ ಅವರು, ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು ಎಂದು ಉಲ್ಲೇಖಿಸಿ ಷರತ್ತುಬದ್ಧ ಮಧ್ಯಂತ್ರ ಜಾಮೀನು ನೀಡಿದೆ. ಆದರೆ, 6 ವಾರಗಳ ಮಧ್ಯಂತರ ಜಾಮೀನು ಇದಾಗಿದೆ. ಎಸ್‌ಪಿಪಿ ಮನವಿ ಮನವಿ ಮೇರೆಗೆ ದರ್ಶನ್‌ ಪಾಸ್‌ಪೋರ್ಟ್‌ ವಶಕ್ಕೆ ನೀಡುವಂತೆ ಸೂಚಿಸಿದೆ.

ನ್ಯಾಯಾಲಯದ ಷರತ್ತು ಪೂರ್ಣಗೊಳಿಸಿದ ಬಳಿಕ ದರ್ಶನ್‌ ಇಂದು ಸಂಜೆಯೊಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಒಟ್ಟಾರೆಯಾಗಿ ಮದ್ಯಂತರ ಜಾಮೀನಿಂದ ದರ್ಶನ್ ಹಾಗೂ ದಾಸನ ಅಭಿಮಾನಿಗಳಿಗೆ ಇಂದಿನಿಂದಲೇ ದೀಪಾವಳಿ ಆರಂಭವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

7 mins ago

ಮಂಡ್ಯಕ್ಕೆ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ ಘೋಷಣೆ

ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…

17 mins ago

ಸಫಾರಿ ಷರತ್ತು ಕಟ್ಟುನಿಟ್ಟಾಗಿ ಜಾರಿಗೆ ತನ್ನಿ ; ಸಚಿವ ಖಂಡ್ರೆ ಸೂಚನೆ

ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ…

33 mins ago

ಮೈಸೂರು | ನಗರದಲ್ಲಿ ಹೆಚ್ಚಿನ ಸಸಿ ನೆಟ್ಟು ನೀರೆರಿಯಿರಿ : ಅರಣ್ಯ ಸಚಿವ ಖಂಡ್ರೆ

ಮೈಸೂರು : ಮುಂಬರುವ ಮಳೆಗಾಲದಲ್ಲಿ ಮೈಸೂರು ನಗರ, ಜಿಲ್ಲೆಯ ಎಲ್ಲಾ ಪ್ರದೇಶಗಳ ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು…

52 mins ago

ಅಜ್ಜೀಪುರದಿಂದ ಶಕ್ತಿಸೌಧಕ್ಕೆ ಪಾದಯಾತ್ರೆ : ರೈತ ಸಂಘಟನೆಗಳ ಬೆಂಬಲಕ್ಕೆ ಮನವಿ

ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ…

1 hour ago

ಕಾಡುಕೋಣ ಡಿಕ್ಕಿ : ಪಲ್ಟಿಯಾದ ಗೂಡ್ಸ್‌ ವಾಹನ

ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.…

2 hours ago