ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟ ದರ್ಶನ್‌ಗೆ ಬುಧವಾರ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಹೀಗಾಗಿ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ಅಭಿಮಾನಿಗಳಿಗೆ ಖುಷಿ ತಂದಿದೆ. ಈ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಇಸ್ಟಾಗ್ರಾಮ್ ಮೂಲಕ ತಮ್ಮ ಇಷ್ಟ ದೇವಿ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಐದು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಆರು ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ನೀಡಿದೆ. ಈ ಹಿನ್ನೆಲೆಯಲ್ಲಿ ಪತ್ನಿ ವಿಜಯಲಕ್ಷ್ಮೀ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ್ದಾರೆ.