Mysore
21
clear sky

Social Media

ಭಾನುವಾರ, 01 ಮಾರ್ಚ್ 2026
Light
Dark

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ.

ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ.

ಅದೇ ರೀತಿ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.

ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಮಾರ್ಚ್.‌3 ರಂದು ಮಧ್ಯಾಹ್ನ 1.30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ರಾತ್ರಿ 7.30ರಿMದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದೆ.

Tags:
error: Content is protected !!