ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್ ಅಕ್ಟೋಬರ್.9ಕ್ಕೆ ಕಾಯ್ದಿರಿಸಿದೆ.
ನಟ ದರ್ಶನ್‌ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಕೆಲ ಸವಲತ್ತು ನೀಡುವಂತೆ ಕೋರ್ಟ್ ಆದೇಶ ನೀಡಿದ್ದರೂ ಜೈಲಾಧಿಕಾರಿಗಳು ಯಾವುದೇ ಸವಲತ್ತು ನೀಡಿಲ್ಲ.
ಇದನ್ನು ಓದಿ : ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ
ಈ ಮೂಲಕ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಾರೆ. ದರ್ಶನ್‌ಗೆ ಯಾವುದೇ ಸವಲತ್ತು ನೀಡಲಾಗಿಲ್ಲ ಎಂಬ ಬಗ್ಗೆ ಖುದ್ದು ಜೈಲಿನಲ್ಲಿ ಪರಿಶೀಲನೆ ನಡೆಸುವಂತೆ ಕೋರಿ ಸಿಆರ್‌ಪಿಸಿ ಸೆಕ್ಷನ್ 310 ರ ಅಡಿ ದರ್ಶನ್ ಪರ ವಕೀಲ ಸುನೀಲ್ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಕೋರ್ಟ್ ವಿಚಾರಣೆಯನ್ನು ಅಕ್ಟೋಬರ್.9ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.





