ರಾಜ್ಯ

ದರ್ಶನ್‌ ಅರ್ಜಿ ವಿಚಾರಣೆ ಅಕ್ಟೋಬರ್.‌9ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್‌ ಅಕ್ಟೋಬರ್.‌9ಕ್ಕೆ ಕಾಯ್ದಿರಿಸಿದೆ.

ನಟ ದರ್ಶನ್‌ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಕೆಲ ಸವಲತ್ತು ನೀಡುವಂತೆ ಕೋರ್ಟ್‌ ಆದೇಶ ನೀಡಿದ್ದರೂ ಜೈಲಾಧಿಕಾರಿಗಳು ಯಾವುದೇ ಸವಲತ್ತು ನೀಡಿಲ್ಲ.

ಇದನ್ನು ಓದಿ : ಜೈಲಿನಲ್ಲಿ ದರ್ಶನ್‌ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ

ಈ ಮೂಲಕ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಾರೆ. ದರ್ಶನ್‌ಗೆ ಯಾವುದೇ ಸವಲತ್ತು ನೀಡಲಾಗಿಲ್ಲ ಎಂಬ ಬಗ್ಗೆ ಖುದ್ದು ಜೈಲಿನಲ್ಲಿ ಪರಿಶೀಲನೆ ನಡೆಸುವಂತೆ ಕೋರಿ ಸಿಆರ್‌ಪಿಸಿ ಸೆಕ್ಷನ್‌ 310 ರ ಅಡಿ ದರ್ಶನ್‌ ಪರ ವಕೀಲ ಸುನೀಲ್‌ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಕೋರ್ಟ್‌ ವಿಚಾರಣೆಯನ್ನು ಅಕ್ಟೋಬರ್.‌9ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಆಂದೋಲನ ಡೆಸ್ಕ್

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

51 mins ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

1 hour ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

1 hour ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

1 hour ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

1 hour ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

1 hour ago