Mysore
22
broken clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೌಂಟರ್‌ ತಿರುಗೇಟು ಕೊಟ್ಟಿದ್ದಾರೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌, ದರ್ಶನ್‌ ವಿಚಾರ ಹಾಗೂ ಮುಡಾ ಆರೋಪ ವಿಚಾರ ಬಿಡಿ. ಈಗ ಮಹದಾಯಿ ವಿಚಾರದಲ್ಲಿ ಏನು ತೊಂದರೆಯಾಗಿದೆ. ಮಹದಾಯಿ ಯೋಜನೆಗೆ ಅನುಪತಿ ಕೊಡಿಸ್ರಪ್ಪ ಎಂದಿದ್ದಾರೆ.

ಮಹದಾಯಿ ಯೋಜನೆ ಜಾರಿ ಮಾಡಲು ದುಡ್ಡು ಕೊಡಿಸ್ರಪ್ಪ. ಗಣೇಶದ ಚತುರ್ಥಿ ಹಬ್ಬದ ದಿನವೇ ವಿಘ್ನ ನಿವಾರಣೆ ಆಗಲಿ. ಇಲ್ಲಿಂದಲೇ ದೀರ್ಘದಂಟ ನಮಸ್ಕಾರ ಹಾಕುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

Tags:
error: Content is protected !!